ಮಾನವೀಯತೆಯ ಸದಾಶಯ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ

GAN
Published on

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭ್ರಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾದ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ರಾಣಿ ಅಬ್ಬಕ್ಕ ಜಯಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕುಂದಾಪುರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್. ಕೆ.ಎಸ್., ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲ ಒಬಿಸಿ ಮೋರ್ಚಾ ಪ್ರಭಾರಿ ಚಂದ್ರ ಜೋಗಿ, ಜಿಲ್ಲಾ ಒಬಿಸಿ ಕಾರ್ಯದರ್ಶಿ ಸಂತೋಷ್ ಪೂಜಾರಿ, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ನಾಗರಾಜ್ ಆಚಾರ್ಯ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net