More

  ದೇಶದ ಪ್ರಗತಿಯಲ್ಲಿ ಯುವಕರ ಪಾತ್ರ ಮಹತ್ವದ್ದು

  ನಂಜನಗೂಡು: ದೇಶದ ಪ್ರಗತಿಯಲ್ಲಿ ಯುವಕರ ಪಾತ್ರ ಮಹತ್ವದ್ದು. ಶ್ರಮದ ಜತೆಗೆ ಉತ್ಸಾಹದಿಂದ ಯುವಕರ ನಾಯಕತ್ವವನ್ನು ಬಳಸಿಕೊಂಡಲ್ಲಿ ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯುಬಹುದು ಎಂದು ಕೋಣನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತಕುಮಾರ್ ಹೇಳಿದರು.

  ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ತಾಲೂಕಿನ ಕೋಣನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

  ವಿದ್ಯಾರ್ಥಿಗಳು ಪರಿಪೂರ್ಣವಾಗಿ ಬೆಳೆಯಲು, ವ್ಯಕ್ತಿತ್ವ ವೃದ್ಧಿಸಿಕೊಳ್ಳಲು, ಓದುವುದರ ಜತೆಗೆ ಸಮಾಜದ ಜವಾಬ್ದಾರಿ ಅರಿಯಲು ರಾಷ್ಟ್ರೀಯ ಸೇವಾ ಯೋಜನೆ ಅವಶ್ಯವಾಗಿದೆ. ವಿದ್ಯಾರ್ಥಿಗಳು ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುವ ಎನ್‌ಎಸ್‌ಎಸ್ ಮತ್ತು ಸಾಂಸ್ಕೃತಿಕ ಚಟುವಟಿಕೆ ಬಗ್ಗೆಯೂ ಗಮನಹರಿಸಬೇಕು ಎಂದರು.

  ಇನ್ನು ವ್ಯಕ್ತಿತ್ವ ಎನ್ನುವುದು ಹುಟ್ಟಿನಿಂದ ಬರುವುದಿಲ್ಲ. ಅದನ್ನು ಸಮಾಜದೊಂದಿಗಿನ ಒಡನಾಟದಿಂದ ರೂಪಿಸಿಕೊಳ್ಳಬೇಕು. ಸಮಾಜದೊಂದಿಗೆ ಬೆರೆಯಲು ಮತ್ತು ಅದನ್ನು ವೈಜ್ಞಾನಿಕವಾಗಿ ಅರ್ಥೈಸಿಕೊಳ್ಳಲು ಇಂತಹ ಚಟುವಟಿಕೆ ಅತ್ಯಂತ ಅವಶ್ಯಕ ಎಂದು ಹೇಳಿದರು.

  ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಆರ್.ಸಿದ್ದರಾಜು ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ನಂಜಮ್ಮಣ್ಣಿ, ಪಿಡಿಒ ಶ್ರೀನಿವಾಸಮೂರ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಸ್.ಬಸವಣ್ಣ, ಉಪಾಧ್ಯಕ್ಷ ಕೆ.ಎಂ.ಬಸವಣ್ಣ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಜೀಮ್ ಉಲ್ಲಾ ಖಾನ್, ಶಾಲೆಯ ಮುಖ್ಯಶಿಕ್ಷಕ ಜಿ.ಎಂ.ನಾಗೇಶ್, ಶಿಕ್ಷಕರಾದ ವಿಶ್ವನಾಥ್, ಅನಿಲ್ ಸೇರಿದಂತೆ ಶಿಬಿರಾರ್ಥಿಗಳು ಭಾಗವಹಿಸಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts