26.3 C
Bengaluru
Sunday, January 19, 2020

ಆರೋಪಿ ರವೀಂದ್ರಗೌಡ ಪಟೇಲ್ ಬಂಧನಕ್ಕೆ ಆಗ್ರಹ

Latest News

ಬೂಕನ ಬೆಟ್ಟದಲ್ಲಿ ವಿಜೃಂಭಣೆಯಿಂದ ನೆರವೇರಿದ ರಥೋತ್ಸವ, ಸಾವಿರಾರು ಭಕ್ತರು ಭಾಗಿ

ಚನ್ನರಾಯಪಟ್ಟಣ: ತಾಲೂಕಿನ ಪುರಾಣ ಪ್ರಸಿದ್ಧ ಬೂಕನಬೆಟ್ಟದಲ್ಲಿ 89 ನೇ ಬೃಹತ್ ದನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಂಗನಾಥಸ್ವಾಮಿಯ ಬ್ರಹ್ಮರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಮುಂಜಾನೆಯಿಂದಲೇ ಶ್ರೀ...

ಶೋಷಿತರಿಗೆ ಅಧಿಕಾರ ಸುಲಭವಲ್ಲ : ಡಾ.ಜಿ.ಪರಮೇಶ್ವರ್

ತುಮಕೂರು: ಮಲಹೊರುವ ಸಮುದಾಯ ರಾಜ್ಯದಲ್ಲಿ ಡಿಸಿಎಂ ಸ್ಥಾನ ಪಡೆಯಲು 71 ವರ್ಷ ಕಾಯಬೇಕಾಯಿತು. ಶೋಷಿತ ಸಮುದಾಯಕ್ಕೆ ರಾಜಕೀಯ ಅಧಿಕಾರ ಸುಲಭವಾಗಿ ಸಿಗುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು. ನಗರದ...

ಸ್ವಾರ್ಥಕ್ಕಾಗಿ ಸಮುದಾಯ ಒಡೆಯದಿರಿ ಎಂದ ಚಿಂತಕ ಮಹೇಂದ್ರಕುಮಾರ್

ತುಮಕೂರು: ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ಸಮುದಾಯಗಳನ್ನು ಒಡೆಯುವುದನ್ನು ಬಿಟ್ಟು ಸಮಾಜ ಕಟ್ಟಲು ಒಗ್ಗೂಡಬೇಕಿದೆ ಎಂದು ಚಿಂತಕ ಮಹೇಂದ್ರಕುಮಾರ್ ಹೇಳಿದರು. ನಗರದ ಧಾನಾ ಪ್ಯಾಲೇಸ್ ಬಳಿ ಜಂಟಿ ಆಕ್ಷನ್...

ಜಾಗ ಸಿಕ್ಕರೆ ಚಿಕ್ಕನಾಯಕನಹಳ್ಳಿಯಲ್ಲಿ ಶೀಘ್ರದಲ್ಲೇ ಡಿಪೋ ನಿರ್ಮಾಣ : ಸಚಿವ ಜೆ.ಸಿ.ವಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿದ್ದು, ಶ್ರೀದಲ್ಲೇ ಪಟ್ಟಣ ವ್ಯಾಪ್ತಿಯಲ್ಲಿ ಡಿಪೋ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ...

ಹೇಮೆ ನಾಲೆ ಆಧುನೀಕರಣಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ : ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು: ತುಮಕೂರು, ಮಂಡ್ಯ ಜಿಲ್ಲೆಗೆ ನೀರು ಹರಿಯುವ 70 ರಿಂದ 166 ಕಿಲೋಮೀಟರ್‌ವರೆಗಿನ ಹೇಮಾವತಿ ನಾಲೆ ಆಧುನೀಕರಣಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ...

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಸಾಮಾಜಿಕ ಜಾಲತಾಣದಲ್ಲಿ ಯೇಸುವಿನ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿರುವುದನ್ನು ಖಂಡಿಸಿ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಆರೋಪಿ ರವೀಂದ್ರಗೌಡ ಪಟೇಲ್‌ನನ್ನು ಬಂಧಿಸುವಂತೆ ಘೋಷಣೆಗಳನ್ನು ಕೂಗಿ ಆತನ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.
ಈ ಸಂದರ್ಭ ಧರ್ಮಗುರು ಫಾ.ಮೊದಲೈ ಮುತ್ತು ಮಾತನಾಡಿ, ಕ್ರಿಸ್‌ಮಸ್ ಸಂದರ್ಭದಲ್ಲಿ ರವೀಂದ್ರಗೌಡ ಪಟೇಲ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಯೇಸು ಕ್ರಿಸ್ತ ಮತ್ತು ಕನ್ಯಾ ಸ್ತ್ರೀಯರ ಅರೆನಗ್ನ ಚಿತ್ರ ಹಾಗೂ ಕ್ರಿಸ್ತರ ಜನನದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿ ಕ್ರೈಸ್ತ ಜನಾಂಗವನ್ನು ಉದ್ರೇಕಗೊಳ್ಳುವಂತೆ ಮಾಡಿದ್ದಾನೆ.

ಭಾರತದ ಸಂವಿಧಾನವನ್ನು ಗೌರವಿಸಿ ಜೀವನ ನಡೆಸುವ ಕ್ರೈಸ್ತ ಜನಾಂಗದಲ್ಲಿ ಅಶಾಂತಿಯನ್ನು ಉಂಟು ಮಾಡಿದ್ದಾನೆ. ನಾಗರಿಕ ಸಮಾಜದಲ್ಲಿ ಅಶಾಂತಿ ಕದಡಲು ಪ್ರೇರೇಪಿಸುವ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾನುನು ಕ್ರಮ ಜರುಗಿಸಬೇಕು ಹಾಗೂ ಶಾಂತಿ ಭಾವೈಕ್ಯತೆಯಿಂದ ಬದುಕುವ ಕ್ರೈಸ್ತ ಬಾಂಧವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

ಕ್ರೈಸ್ತ ಸಂಘಟನೆಗಳ ಮುಖಂಡ ಬೇಬಿ ಮ್ಯಾಥ್ಯು ಮಾತನಾಡಿ, ಕ್ರೈಸ್ತರು ಶಾಂತಿ ಸಾರುವವರು. ಆದರೆ ಇದೀಗ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ದೇಶದಲ್ಲಿ ಅಶಾಂತಿ ವಾತಾವರಣ ತರಲು ಕುತಂತ್ರ ನಡೆಸುತ್ತಿದ್ದಾರೆ. ಹಲವಾರು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಾ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಬುದ್ಧಿವಂತರಾದ ನಾವುಗಳು ಇದಕ್ಕೆ ಸೊಪ್ಪು ಹಾಕಬಾರದು. ನಾಗರಿಕ ಸಮಾಜದ ಪ್ರತಿಯೊಬ್ಬರೂ ಶಾಂತಿ ಕಾಪಾಡಲು ಪ್ರಯತ್ನಿಸಬೇಕು. ದುಷ್ಟ ಕ್ರಿಯೆಗಳನ್ನು ಮಾಡುವವರನ್ನು ತಕ್ಷಣ ಬಂಧಿಸಿ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜೋಸೆಫ್ ಸ್ಯಾಮ್ ಮಾತನಾಡಿ, ಕ್ರೈಸ್ತ ಸಮುದಾಯದವರು ಸಮಾಜದ ಎಲ್ಲಾ ವರ್ಗದ ಜನರೊಂದಿಗೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ನಾವೆಲ್ಲರೂ ಒಂದೇ ಎಂಬ ತತ್ವವನ್ನು ಪಾಲಿಸುತ್ತಾ ಎಲ್ಲರೊಂದಿಗೂ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದೇವೆ. ಆದರೆ ರವೀಂದ್ರಗೌಡ ಪಟೇಲ್ ಮನಸಿಗೆ ತೋಚಿದಂತೆ ಕೆಟ್ಟ ರೀತಿಯಲ್ಲಿ ಯೇಸು ಕ್ರಿಸ್ತರ ಬಗ್ಗೆ ಚಿತ್ರಗಳನ್ನು ಪ್ರಕಟಿಸಿದ್ದಾನೆ. ಈತನನ್ನು ಕೂಡಲೇ ಬಂಧಿಸಿ ಕ್ರೈಸ್ತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.

ಕ್ಯತೆಯಿಂದ ಬದುಕುವ ಕ್ರೈಸ್ತ ಬಾಂಧವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

ವಿಡಿಯೋ ನ್ಯೂಸ್

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...