ಮಹನೀಯರ ತ್ಯಾಗ ಸ್ಫೂರ್ತಿದಾಯಕ

creative
ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕ ಅಶ್ವಥ್ ಎಸ್.ಎಲ್. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
Published on

ಕಾರ್ಕಳ: ಕನ್ನಡ ನಾಡು ತನ್ನದೇ ಆದ ಪರಂಪರೆಯನ್ನು ಹೊಂದಿದ್ದು, ಈ ನಾಡನ್ನು ಕಟ್ಟುವಲ್ಲಿ ಮಹನೀಯರ ತ್ಯಾಗ, ಹೋರಾಟ, ಬಲಿದಾನ ಸ್ಫೂರ್ತಿದಾಯಕ ಎಂದು ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕ ಅಶ್ವಥ್ ಎಸ್.ಎಲ್. ಹೇಳಿದರು.

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಉಪನ್ಯಾಸಕ ಶಿವಕುಮಾರ್, ಸಂತೋಷ್, ವಾಣಿಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ, ನಿಲಯ ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net