ಬಾದಾಮಿ: ಸ್ವಾಮಿ ವಿವೇಕಾನಂದರು ಭಾರತೀಯ ಸನಾತನ ಸಂಸ್ಕೃತಿ ಮತ್ತು ಅಧ್ಯಾತ್ಮ ಪರಂಪರೆ ಚಿಂತನೆಗಳ ಬಗ್ಗೆ ವಿಶ್ವಕ್ಕೆ ತಿಳಿಸಿಕೊಟ್ಟಿದ್ದಾರೆ ಎಂದು ಓಂಕಾರ ಶಿರಾಳಶೆಟ್ಟಿ ಹೇಳಿದರು.
ತಾಲೂಕಿನ ಚೊಳಚಗುಡ್ಡ ಗ್ರಾಮದ ಜಿ.ವಿ.ಹಿರೇಮಠ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಆಶ್ರಯದಲ್ಲಿ ಬಸಯ್ಯ ಹಂಗರಗಿ, ಶರಣಯ್ಯ ವಸ್ತ್ರದ, ವಿಕ್ರಮ ಪೈಲ, ಚಂದ್ರಶೇಖರ ಶಿವಮಠ, ಈರಯ್ಯ ಶಿರಹಟ್ಟಿಮಠ ಸ್ಮರಣಾರ್ಥ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳ ಕುರಿತು ಅವರು ಉಪನ್ಯಾಸ ನೀಡಿದರು.
ನಿವೃತ್ತ ಪ್ರಾಚಾರ್ಯ ಎ.ಎಸ್. ವಸ್ತ್ರದ ಮಾತನಾಡಿ, ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ. ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಾಗಲಿ ಎಂದರು.
ಮುಖ್ಯ ಶಿಕ್ಷಕ ಬಸವರಾಜ ಕಲಗುಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಬಿ.ಎ್. ಹೊರಕೇರಿ, ಮಹಾಂತೇಶ ಈಳಗೇರ, ಜೆ.ಸಿ.ಶಿವಮಠ, ವಿ.ಎಸ್.ಶೆಟ್ಟರ ಮತ್ತಿತರರಿದ್ದರು.