20.4 C
Bangalore
Monday, December 9, 2019

ಅಮೆರಿಕದ ಕಿರಾಣಿ ಅಂಗಡಿಯೊಂದರಲ್ಲಿ ಮಾರಾಟಕ್ಕಿವೆ ಹಸುವಿನ ಸಗಣಿಯ ಬೆರಣಿಗಳು; ಪ್ಯಾಕೆಟ್​ ಮೇಲೆ ಬರೆದಿದ್ದನ್ನು ನೋಡಿದರೆ ನಗು ಬಾರದೆ ಇರದು…

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ನವದೆಹಲಿ: ಹಸುವಿನ ಸಗಣಿಯ ಬೆರಣಿ ಅಮೇಜಾನ್​, ಫ್ಲಿಪ್​ಕಾರ್ಟ್​ಗಳಲ್ಲಿ ಮಾರಾಟಕ್ಕೆ ಇಟ್ಟಿದ್ದು ಹಳೇ ಸುದ್ದಿ. ಆದರೆ ಯುಎಸ್​​ನ ಅಂಗಡಿಯೊಂದರಲ್ಲಿ ಕೂಡ ಸಗಣಿಯ ಬೆರಣಿಯನ್ನು ಸೇಲ್​ ಮಾಡುತ್ತಿರುವುದು ಭಾರತೀಯ ಮೂಲದ ಪತ್ರಕರ್ತರೋರ್ವರ ಟ್ವೀಟ್​ನಿಂದ ಗೊತ್ತಾಗಿದೆ.

10 ಬೆರಣಿಗಳುಳ್ಳ ಒಂದು ಪ್ಯಾಕೆಟ್​ಗೆ 215 ರೂ.(2.99 ಡಾಲರ್​) ಬೆಲೆ ನಿಗದಿಪಡಿಸಲಾಗಿದೆ. ಅದರ ಮೇಲೆ ಬರೆದಿರುವ ಒಂದು ವಿಶಿಷ್ಟ ಲೇಬಲ್​ ಗಮನ ಸೆಳೆಯುತ್ತದೆ. ಕೌ ಡಂಗ್​ ಕೇಕ್​ ಎಂದು ಬರೆದು, ಕೆಳಗೆ ಇದು ಧಾರ್ಮಿಕ ಕಾರ್ಯಕ್ರಮಗಳ ಬಳಕೆಗೆ ಹೊರತು ತಿನ್ನಲು ಅಲ್ಲ (Religious purposes” and was “not eatable) ಎಂದು ನಮೂದಿಸಲಾಗಿದೆ. ಇದನ್ನು ನೋಡಿದ ಸೋಷಿಯಲ್​ ಮೀಡಿಯಾ ಬಳಕೆದಾರರು​ ನಗುತ್ತಿದ್ದಾರೆ.

ನನ್ನ ಕಸಿನ್​ ಈ ಫೋಟೋವನ್ನು ಕಳಿಸಿದ್ದಾರೆ. ನ್ಯೂಜರ್ಸಿಯ ಎಡಿಸನ್​ನಲ್ಲಿರುವ ಕಿರಾಣಿ ಅಂಗಡಿಯೊಂದರಲ್ಲಿ ಬೆರಣಿಯನ್ನು ಮಾರಾಟಕ್ಕೆ ಇಡಲಾಗಿದೆ. ಇದು ಭಾರತದ ದೇಸಿ ಹಸುವಿನ ಸಗಣಿಯ ಬೆರಣಿಯಾ ಅಥವಾ ಅಮೆರಿಕದ ಹಸುಗಳ ಸಗಣಿಯದ್ದಾ? ಎಂಬುದು ನನ್ನ ಪ್ರಶ್ನೆ ಎಂದು ಪತ್ರಕರ್ತರು ಟ್ವೀಟ್​ ಮಾಡಿದ್ದಾರೆ.
ಆದರೆ ಟ್ವಿಟರ್​ನಲ್ಲಿ ಪೋಸ್ಟ್​ ಮಾಡುತ್ತಲೇ ಇದು ಅನೇಕ ಜನರ ಗಮನ ಸೆಳೆದಿದೆ. ಹಲವರು ಸಿಕ್ಕಾಪಟೆ ಜೋಕ್​ ಮಾಡುತ್ತಿದ್ದಾರೆ.

ಈ ಬೆರಣಿಗಳನ್ನು ಅಮೆರಿಕದಲ್ಲಿ ‘ಕುಕ್ಕೀಸ್​’ ಎಂದು ಮಾರಾಟ ಮಾಡುವುದು ಉತ್ತಮ ಎಂದು ಟ್ವಿಟರ್​ ಬಳಕೆದಾರರೊಬ್ಬರು ಕಾಮೆಂಟ್​ ಬರೆದಿದ್ದಾರೆ.

ಈ ಬೆರಣಿಗಳನ್ನು ಭಾರತೀಯ ಹಸುಗಳ ಸೆಗಣಿಯಿಂದ ಮಾಡಿದ್ದಾರೆ ಎಂದು ಅನ್ನಿಸುತ್ತಿಲ್ಲ ಎಂದು ಮತ್ತೋರ್ವರು ಹೇಳಿದ್ದಾರೆ.

ಇದು ಎಮ್ಮೆ ಸಗಣಿಯದ್ದಾ? ಎಂದು ಇನ್ನೋರ್ವರು ಕಾಲೆಳೆದಿದ್ದಾರೆ. ಒಟ್ಟಿನಲ್ಲಿ ಯುಎಸ್​ ಅಂಗಡಿಯೊಂದರಲ್ಲಿ ಮಾರಾಟಕ್ಕಿಟ್ಟ ಬೆರಣಿಗಳು ಟ್ವಿಟರ್​ನಲ್ಲಿ ಸಖತ್​ ಸದ್ದುಮಾಡುತ್ತಿವೆ.(ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...