More

    700 ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ

    ಎಚ್.ಡಿ. ಕೋಟೆ : ತಾಲೂಕಿನಲ್ಲಿ 700 ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಈಗಾಗಲೇ 200 ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಚಿಕ್ಕದೇವಮ್ಮನ ಬೆಟ್ಟದ ಅಭಿವೃದ್ಧಿಗೆ 2.5 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಅನೀಲ್ ಚಿಕ್ಕಮಾದು ತಿಳಿಸಿದರು.

    ಕೆಲವು ತಿಂಗಳಿಂದ ಆರೋಗ್ಯ ಸಮಸೆಯಿಂದ ಕೆಲ ಕಾರ್ಯಕ್ರಮಗಳಿಗೆ ಆಗಮಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಜನತೆ ಕ್ಷಮೆ ಕೋರುವುದಾಗಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    25 ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದೆ. ಅನಾರೋಗ್ಯದಿಂದ ತಂದೆ ಚಿಕ್ಕಮಾದು ಮತ್ತು ಮಾಜಿ ಸಂಸದ ಧ್ರುವನಾರಾಯಣ ಅವರನ್ನು ಕಳೆದುಕೊಂಡಿದ್ದೇವೆ. ಆದ್ದರಿಂದ ಎಲ್ಲರೂ ಆರೋಗ್ಯದತ್ತ ಗಮನಹರಿಸಿ ಎಂದರು.

    ಅಂತರಸಂತೆ, ಹಂಪಾಪುರ, ಮನುಗನಹಳ್ಳಿ ಕುಡಿಯುವ ನೀರಿನ ಯೋಜನೆ ಸಂಪೂರ್ಣ ಪೂರ್ಣಗೊಂಡಿದ್ದು, ಪ್ರತಿ ಮನೆಗೂ ನಲ್ಲಿ ಸಂಪರ್ಕ ನೀಡಲಾಗಿದೆ. ವಿವಿಧ ಗ್ರಾಮಗಳಲ್ಲಿ 40 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಆರಂಭಿಸಿಲಾಗುವುದು. ಮುಖ್ಯಮಂತ್ರಿ ಅನುದಾನದಲ್ಲಿ ಇಪ್ಪತೈದು ಕೋಟಿ ರೂ. ತರಲಾಗಿದೆ. ಇದನ್ನು ಸಮುದಾಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು. ಕೆಂಪೇಗೌಡ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ತಾಲೂಕಿನಲ್ಲಿ 71 ಸಾವಿರ ಜನ ಶಕ್ತಿ ಯೋಜನೆ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.

    ಕಬಿನಿ ಬೃಂದಾವನಕ್ಕೆ ಟೆಂಡರ್ ಹಂತದಲ್ಲಿದೆ. ಮೈಸೂರು ಮಾನಂದವಾಡಿ ರಸ್ತೆ ಕಾಮಗಾರಿ ಕೈಗೆತ್ತಿಗೊಳ್ಳಲಾಗುವುದು. ತಾಲೂಕಿನ ಉದ್ಬೂರಿನಿಂದ ಬಾವಲಿವರಗೆ ಮೆಲ್ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

    ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳಿಂದ ಜಯ ಗಳಿಸುತ್ತೇವೆ. ಪಕ್ಷದ ಪರವಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಮಹದೇವಪ್ಪ ಅವರು ಹೆಸರು ಕೇಳಿ ಬರುತ್ತಿದೆ. ಯಾರೇ ಅಭ್ಯರ್ಥಿಯಾದರೂ ಪಕ್ಷ ಸಂಘಟಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ತಿಳಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಬಜೆಟ್ ನೀಡಿದ್ದಾರೆ. ತಾಲೂಕಿಗೆ ವಿಶೇಷ ಪ್ಯಾಕೆಜ್ ಘೋಷಿಸಬೇಕು ಎಂದು ಅವರನ್ನು ಒತ್ತಾಯಿಸಲಾಗಿದೆ. ಅಲ್ಲದೇ ಆದಿವಾಸಿಗಳಿಗೆ ಪ್ರತ್ಯೇಕ ನಿಗಮವನ್ನು ನಿರ್ಮಾಣಕ್ಕೆ ಒತ್ತಾಯಿಸಲಾಗುವುದು ಎಂದರು.

    ಜಂಗಲ್ ರೆಸಾರ್ಟ್‌ನಲ್ಲಿ ಸಿರಿಧಾನ್ಯಗಳ ಬಳಕೆಗೆ ಒತ್ತು ನೀಡಲಾಗುವುದು, ಅರವತ್ತು ವರ್ಷ ಮೇಲ್ಪಟ್ಟವರಿಗೆ ಶೇ.30 ರಿಯಾಯಿತಿ, ಮಹಿಳಾ ದಿನಗಳಲ್ಲಿ ರಿಯಾಯಿತಿ ಮತ್ತು ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡುವಂತೆ ಆದೇಶಿಸಲಾಗಿದೆ. ಸಫಾರಿಗೆ ನಮ್ಮ ತಾಲೂಕಿನವರಿಗೆ ರಿಯಾಯಿತಿ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts