ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಬಂಧನಕ್ಕೆ ಸುಪ್ರೀಂ ತಡೆ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಮಾನ್ಯವೆಂದ ಕೋರ್ಟ್​

Latest News

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಕೋಲ್ಕತ: ಲೋಕಸಭಾ ಚುನಾವಣೆ ವೇಳೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿ ಬಂಧನ ಭೀತಿಯಲ್ಲಿದ್ದ ಬರಕ್​ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಅವರಿಗೆ ಸದ್ಯ ರಿಲೀಫ್​ ಸಿಕ್ಕಿದ್ದು, ಅವರ ಬಂಧನಕ್ಕೆ ಸುಪ್ರೀಂಕೋರ್ಟ್​ ಐದು ದಿನಗಳ ತಡೆಯಾಜ್ಞೆ ನೀಡಿದೆ.

ಪಶ್ಚಿಮಬಂಗಾಳ ಪೊಲೀಸರು ನನ್ನನ್ನು ಬಂಧಿಸುವುದಾಗಿ ಹೇಳಿದ್ದಾರೆ. ಗುರುವಾರ ನಡೆಯಲಿರುವ ಮತ ಎಣಿಕೆ ಸಮಯದಲ್ಲಿ ಉಪಸ್ಥಿತರಿರುವುದನ್ನು ತಡೆಯುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್​ಗೆ ವಕೀಲ ರಂಜಿತ್​ ಮಿಶ್ರಾ ಮೂಲಕ ಅರ್ಜಿ ಸಲ್ಲಿಸಿದ್ದರು.

ಅರ್ಜುನ್​ ಸಿಂಗ್​ ಬಂಧನದ ಭೀತಿಯಲ್ಲಿದ್ದು, ಅವರನ್ನು ಬಂಧಿಸದಂತೆ ನ್ಯಾಯಾಲಯ ಆದೇಶಿಸಬೇಕು ಎಂದು ರಂಜಿತ್​ ಮಿಶ್ರಾ ಕೋರ್ಟ್​ನಲ್ಲಿ ವಾದಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಅಲ್ಲಿ ಕೆಲವರು ಕಾರಣವೇ ಇಲ್ಲದೆ ಹೊಡೆದಾಡುತ್ತಾರೆ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರುಣ್​ ಮಿಶ್ರಾ ಹಾಗೂ ಎಂ.ಆರ್​ ಶಾಹ್​ ಅವರನ್ನೊಳಗೊಂಡ ಪೀಠ​ ಹೇಳಿದ್ದು, ಅರ್ಜುನ್​ ಸಿಂಗ್​ ಅವರಿಗೆ ತಾತ್ಕಾಲಿಕ ರಕ್ಷಣೆ ನೀಡಿದೆ.

ಕೊನೇ ಹಂತದ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಕಡೆಯ ಗೂಂಡಾಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ತೃಣಮೂಲ ಕಾಂಗ್ರೆಸ್​ ಮುಖಂಡರೋರ್ವರು ಪೊಲೀಸರಿಗೆ ದೂರು ನೀಡಿದ್ದರು.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...