ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಮುಂದುವರಿಸಲು ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರಿದ್ದ ನ್ಯಾಯಮೂರ್ತಿಗಳಾದಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಭದ್ರತೆ ಮುಂದುವರೆಸಲು ಅನುಮತಿಸಿದೆ.
ತ್ರಿಪುರಾ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಭದ್ರತೆ ಮುಂದುವರಿಸಲು ಸೂಚಿಸಿದೆ.
ಮುಂಬೈನಲ್ಲಿರುವ ಉದ್ಯಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜೂನ್ 29 ರಂದು ತಡೆ ನೀಡಿತ್ತು.
ಬಿಕಾಶ್ ಸಾಹಾ ಎಂಬುವವರು ಮುಕೇಶ್ ಅಂಬಾನಿಗೆ ನೀಡಲಾಗಿರುವ ಭದ್ರತೆಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. (ಏಜೆನ್ಸೀಸ್)
ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೂ 10 ಜಿಲ್ಲೆಗಳಲ್ಲಿ ಮಳೆಯೇ ಇಲ್ಲ! ಮತ್ತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ