ಸರ್ಕಾರಿ ಶಾಲೆಗಳ ಉಳಿವು ನಮ್ಮ ಹೊಣೆ

blm
Published on

ಶಿರ್ವ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗುತ್ತಿದ್ದು, ನಾವು ಈ ಬಗ್ಗೆ ಎಚ್ಚರ ವಹಿಸಿ ಸಂಸ್ಥೆಗಳನ್ನು ಉಳಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು. ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಅದಾನಿ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಸ್ಕೂಲ್ ಬ್ಯಾಗ್ ಸಹಿತ ಕಲಿಕಾ ಸಾಮಗ್ರಿ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಅದಾನಿ ಸಂಸ್ಥೆಯ ಅಸೋಸಿಯೆಟ್ ಜನರಲ್ ಮ್ಯಾನೇಜರ್ ರವಿ ಜೇರೆ ವಿದ್ಯಾವರ್ಧಕ ಸಂಸ್ಥೆಗಳ ವಿದ್ಯಾರ್ಥಿಗಳು, ಶಿಕ್ಷಣದ ಗುಣಮಟ್ಟ ಹಾಗೂ ಶಿಕ್ಷಕರ ಕುರಿತು ಮೆಚ್ಚುಗೆ ಸೂಚಿಸಿದರು. ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅದಾನಿ ಫೌಂಢೇಶನ್‌ನ ಅನುದೀಪ್, ಶಿಕ್ಷಕರಾದ ವೀಣಾ, ಕೇಶವ, ಗಣೇಶ್, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಂದರ ಮೇರಾ ಸ್ವಾಗತಿಸಿದರು. ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net