ಮೇ 22ರಿಂದ 29ರವೆರೆಗೆ ಬೆಂಗಳೂರು-ಶಿವಮೊಗ್ಗ ನಡುವೆ ರೈಲು ಓಡಾಟ ಸ್ಥಗಿತ

ಬೆಂಗಳೂರು: ತುಮಕೂರಿನಲ್ಲಿ ರೈಲ್ವೆ ಹಳಿ ಡಬ್ಲಿಂಗ್​ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ ಶಿವಮೊಗ್ಗ-ಬೆಂಗಳೂರು ಮಧ್ಯೆ ಒಂದು ವಾರ ರೈಲು ಓಡಾಟ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮೇ 22ರಿಂದ 29ರವರೆಗೆ ತುಮಕೂರು-ಗುಬ್ಬಿ ಮಾರ್ಗದಲ್ಲಿ ಡಬ್ಲಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆ ರೈಲು ಓಡಾಟ ಸ್ಥಗಿತಗೊಳಿಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡಬ್ಲಿಂಗ್​ನಿಂದಾಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸುವ ರೈಲುಗಳು ಮತ್ತು ತಾಳಗುಪ್ಪಾದಿಂದ ಬೆಂಗಳೂರಿಗೆ ಪ್ರಯಾಣಿಸುವ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *