More

    ಜನ, ನಾಯಕರ ವಿಶ್ವಾಸ ಹುಸಿಗೊಳಿಸಲ್ಲ:ಆಯನೂರು

    ಶಿವಮೊಗ್ಗ: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ನನಗೆ ದೊರೆತಿದ್ದ ಮತಗಳನ್ನು ಈ ಬಾರಿ ಕಾಂಗ್ರೆಸ್ ಮತವಾಗಿ ಪರಿವರ್ತಿಸಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

    ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಚುನಾವಣೆ ಸಮಿತಿ ಅಭ್ಯರ್ಥಿ ಘೋಷಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಕ್ಷೇತ್ರದ ಎಲ್ಲ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಉಸ್ತುವಾರಿ, ಸಿಎಂ ಹಾಗೂ ಡಿಸಿಎಂ ನನ್ನ ಮೇಲೆ ವಿಶ್ವಾಸವಿರಿಸಿ ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆ ಹುಸಿಗೊಳಿಸುವುದಿಲ್ಲ ಎಂದರು.
    ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬುದು ಪ್ರಶ್ನೆಯೇ ಅಲ್ಲ. ಮತದಾರರಿಗೆ ನನ್ನ ಮೇಲೆ ವಿಶ್ವಾಸವಿದೆ. ಈ ಚುನಾವಣೆ ವಿಧಾನಸಭೆಗಿಂತಲೂ ಭಿನ್ನ. ವಿಧಾನಸಭೆಯಲ್ಲಿ ನಾನು ಬಯಸಿದ ಪಕ್ಷದಿಂದ ಟಿಕೆಟ್ ಸಿಗಲಿಲ್ಲ. ಹೀಗಾಗಿ ಉತ್ತಮ ಫಲಿತಾಂಶ ಸಿಗಲಿಲ್ಲ. ಆದರೆ ಈ ಬಾರಿ ಅದು ಪುನರಾವರ್ತನೆ ಆಗುವುದಿಲ್ಲ ಎಂದು ಹೇಳಿದರು.
    ಇಬ್ಬರೂ ನಮ್ಮ ಪಕ್ಷದಲ್ಲಿ: ನೈಋತ್ಯ ಪದವೀಧರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಆಯನೂರು ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆಗ ನಮ್ಮ ಪಕ್ಷದ ಅಭ್ಯರ್ಥಿ ಎಸ್.ಪಿ.ದಿನೇಶ್ ಎರಡನೇ ಸ್ಥಾನ ಪಡೆದಿದ್ದರು. ಅವರಿಬ್ಬರೂ ಈಗ ನಮ್ಮ ಪಕ್ಷದಲ್ಲೇ ಇದ್ದಾರೆ. ಆದ್ದರಿಂದ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ವಿಶ್ವಾಸ ವ್ಯಕ್ತಪಡಿಸಿದರು.
    ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್, ಮಾಜಿ ಮೇಯರ್ ಎಸ್.ಕೆ.ಮರಿಯಪ್ಪ, ನಗರ ಪಾಲಿಕೆ ಮಾಜಿ ಸದಸ್ಯ ಧೀರರಾಜ್ ಹೊನ್ನವಿಲೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಎನ್.ಡಿ.ಪ್ರವೀಣ್‌ಕುಮಾರ್, ಪ್ರಮುಖರಾದ ಎಸ್.ಪಿ.ಶೇಷಾದ್ರಿ, ಎನ್.ರಮೇಶ್, ಚಂದ್ರಭೂಪಾಲ್, ಎಸ್.ಟಿ.ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts