More

    ಮಣಿಪುರ ಮಹಿಳೆಯರ ವೈರಲ್ ವಿಡಿಯೋ ಕುರಿತು ಪ್ರತಿಕ್ರಿಯಿಸಿದ ಅಮೆರಿಕ

    ಮಣಿಪುರ: ಮೇ 4 ರಂದು ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡಿದ ವಿಡಿಯೋ ಜುಲೈ 19 ರಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಾಗ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

    ಈ ಕುರಿತು ಅಮೆರಿಕದ ಶ್ವೇತಭವನದಲ್ಲಿ ಅಧ್ಯಕ್ಷ ಬಿಡೆನ್ ಅವರ ಸಹಾಯಕ ಪತ್ರಿಕಾ ಕಾರ್ಯದರ್ಶಿ ಮತ್ತು ವಕ್ತಾರರಾಗಿ ಸೇವೆ ಸಲ್ಲಿಸುತ್ತಿರುವ ವೇದಾಂತ್ ಪಟೇಲ್ ಮಾತನಾಡಿ, “ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ನಡೆದ ಈ ತೀವ್ರವಾದ ದಾಳಿಯ ವಿಡಿಯೋ ನೋಡಿ ನಾವು ಆಘಾತಕ್ಕೊಳಗಾಗಿದ್ದೇವೆ ಹಾಗೂ ಗಾಬರಿಗೊಂಡಿದ್ದೇವೆ. ಲಿಂಗ ಆಧಾರಿತ ಹಿಂಸಾಚಾರದ ಈ ಕೃತ್ಯದಿಂದ ಬದುಕುಳಿದವರಿಗೆ ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ನ್ಯಾಯವನ್ನು ಹುಡುಕುವ ಭಾರತ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತೇವೆ ”ಎಂದು ತಿಳಿಸಿದರು.

    ಮಣಿಪುರದಲ್ಲಿ ನಡೆದ ಹಿಂಸಾಚಾರದ ಕುರಿತು ಪಾಕಿಸ್ತಾನಿ ವರದಿಗಾರರು ಕೇಳಿದ ಪ್ರಶ್ನೆಗೆ ಪಟೇಲ್ ಈ ರೀತಿ ಪ್ರತಿಕ್ರಿಯಿಸಿದ್ದು, ಯಾವುದೇ ಸುಸಂಸ್ಕೃತ ಸಮಾಜದಲ್ಲಿ ಮಹಿಳೆಯರ ಮೇಲಿನ ಇಂತಹ ದೌರ್ಜನ್ಯ ನಾಚಿಕೆಗೇಡಿನ ಸಂಗತಿ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾವು ಹಿಂದೆ ಹೇಳಿದಂತೆ, ಮಣಿಪುರದಲ್ಲಿನ ಹಿಂಸಾಚಾರಕ್ಕೆ ಶಾಂತಿಯುತ ಪರಿಹಾರ ಹುಡುಕುತ್ತಿದ್ದೇವೆ. ಎಲ್ಲಾ ಗುಂಪುಗಳ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತೇವೆ ಎಂದು ಹೇಳಿದ್ದಾರೆ.

    Kargil Vijay Diwas 2023: “ನಿಮ್ಮಿಂದಾಗಿ ನಾವು ಬದುಕುತ್ತಿದ್ದೇವೆ”… ಭಾರತೀಯ ಸೇನೆಯ ಶೌರ್ಯಕ್ಕೆ ಸೆಲೆಬ್ರಿಟಿಗಳಿಂದ ಸೆಲ್ಯೂಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts