More

    ಯಲವಗುಳಿ ಗ್ರಾಮಸ್ಥರಿಂದ ಮತದಾನ ಬಹಿಷ್ಕರಿಸಿ ಪ್ರತಿಭಟನೆ

    ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್-ಯಲವಗುಳಿ ರಸ್ತೆ ಅಭಿವೃದ್ಧಿಪಡಿಸುವಲ್ಲಿ ವಿಳಂಭ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ, ಯಲವಗುಳಿ ಗ್ರಾಮಸ್ಥರು ಲೋಕಸಭೆ ಚುನಾವಣೆಯ ಮತದಾನ ಬಹಿಷ್ಕರಿಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
    ಟೇಕಲ್‌ನಿಂದ ಯಲವಗುಳಿ ಗ್ರಾಮಕ್ಕೆ ಹಾದು ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ವೈ.ನಂಜೇಗೌಡ ಹಾಗೂ ಸಂಸದ ಎಸ್.ಮುನಿಸ್ವಾಮಿ ಚಾಲನೆ ನೀಡಿ ಆರು ತಿಂಗಳುಗಳೆ ಕಳೆದಿವೆ. ಅಂದಿನಿಂದ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಕೇಳಿದರೆ ಟೆಂಡರ್ ಪಡೆದುಕೊಂಡಿರುವ ಗುತ್ತಿಗೆದಾರರನ್ನು ವಿಚಾರಿಸಿ ಎಂದು ಹೇಳುತ್ತಾರೆ. ಜನರ ಸಮಸ್ಯೆಯ ಬಗ್ಗೆ ಅವರಿಗೆ ಕಾಳಜಿ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸತೀಶ್ ಮಾತನಾಡಿ, ರಸ್ತೆ ಹದಗೆಟ್ಟು ಸುಮಾರು ವರ್ಷಗಳೆ ಆಗಿತ್ತು. ರಸ್ತೆ ಅಭಿವೃದ್ಧಿಪಡಿಸಲು ಜನಪ್ರತಿನಿಽಗಳ ಮೇಲೆ ಒತ್ತಡ ಹಾಕಲಾಗಿತ್ತು, ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಶಾಸಕ ಕೆ.ವೈ.ನಂಜೇಗೌಡ, ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದ್ದರು ಎಂದರು.
    ಸುಮಾರಾಗಿದ್ದ ರಸ್ತೆಯನ್ನು ಕಿತ್ತು, 2 ಕೋಟಿ ರೂ. ವೆಚ್ಚಕ್ಕೆ ಕ್ರಿಯಾ ಯೋಜನೆ ತಯಾರಿಸಿ ಟೆಂಡರ್ ಕರೆಯಲಾಗಿತ್ತು. ಭೂಮಿಪೂಜೆಯಾಗಿ 6 ತಿಂಗಳು ಕಳೆದರು ಕೆಲಸ ಪೂರ್ಣಗೊಂಡಿಲ್ಲ. ಇದೀಗ ಗುತ್ತಿಗೆದಾರ ಜಲ್ಲಿ ಕಲ್ಲು ಹಾಕಿ ಹಾಗೆ ಬಿಟ್ಟಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶವಿಲ್ಲದಂತಾಗಿದೆ. ಹಿಂದೆಯು ಕೆಲ ದ್ವಿಚಕ್ರ ವಾಹನ ಸವಾರರು ಆಯ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿರುವ ನಿದರ್ಶನಗಳು ಇವೆ. ಕೆಲಸವನ್ನು ಇನ್ನಾದರು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
    ಟೆಂಡರ್ ಪಡೆದುಕೊಂಡಿರುವ ಗುತ್ತಿಗೆದಾರ ಸೊಣ್ಣೇಗೌಡ ಕಾಮಗಾರಿ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ನಿರ್ವಹಿಸಿಲ್ಲ. ಜಿಲ್ಲಾ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದರೂ ಇದುರೆಗೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಗ್ರಾಮಸ್ಥರೆಲ್ಲ ಸೇರಿ ಪ್ರತಿಭಟನೆ ಮಾಡಿ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
    ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಪ್ರಶಾಂತ್‌ಗೌಡ, ಸುರೇಶ್, ಜಗ್ಗಯ್ಯ, ಆಂಜಿನಪ್ಪ, ರಾಮಪ್ಪ, ಸುಬ್ರಹ್ಮಣಿ, ಗೋಪಿ, ಚಂದ್ರಪ್ಪ, ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts