More

    ಅಜ್ಜಿ-ಮೊಮ್ಮಗನ ಪ್ರಾಣವನ್ನೇ ತೆಗೆದ ಗೋಡೆ! ಸತತ ಮಳೆಯಿಂದಾದ ದುರಂತ

    ಬೆಳಗಾವಿ: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಕರ್ನಾಟಕದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಸತತವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಮನೆಯೊಳಗೆ ಮಲಗಿದ್ದ ಅಜ್ಜಿ ಮೊಮ್ಮಗ ಅಲ್ಲಿಯೇ ಪ್ರಾಣ ಬಿಟ್ಟಿರುವ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.

    ದೊಡ್ಡವ್ವ ಪಟ್ಟೇದ(55), ಅವರ ಮೊಮ್ಮಗ ಅಭಿಷೇಕ(3) ಮೃತ ದುರ್ದೈವಿಗಳು. ಇಟಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಅದೇ ಕಾರಣಕ್ಕೆ ದೊಡ್ಡವ್ವ ಅವರ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿ ಮಲಗಿದ್ದ ಅಜ್ಜಿ ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ದೊಡ್ಡವ್ವ ಅವರ ಮಗ ಸುರೇಶ,‌ ಸೊಸೆ ಮಂಜುಳಾ ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ನರ್ಸ್​ ಕೆನ್ನೆಗೆ ಹೊಡೆದ ವೈರಲ್​ ವಿಡಿಯೋದಲ್ಲಿದ್ದ ಡಾಕ್ಟರ್​ ಶವ ಪತ್ತೆ! ಕುಟುಂಬದವರು ಹಾಗೆ ಮಾಡಿದ್ದಾದರೂ ಏಕೆ?

    ನರ್ಸ್​ ಕೆನ್ನೆಗೆ ಹೊಡೆದ ವೈರಲ್​ ವಿಡಿಯೋದಲ್ಲಿದ್ದ ಡಾಕ್ಟರ್​ ಶವ ಪತ್ತೆ! ಕುಟುಂಬದವರು ಹಾಗೆ ಮಾಡಿದ್ದಾದರೂ ಏಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts