More

    ಕೆ. ಸಾಲುಂಡಿ ಗ್ರಾಮದ ಜಲಮೂಲವೇ ಕಲುಷಿತ..!

    ಮೈಸೂರು: ಕೆ.ಸಾಲುಂಡಿ ಗ್ರಾಮಕ್ಕೆ ಒಟ್ಟು ಮೂರು ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಮೂರು ಕೊಳವೆ ಬಾವಿಗಳ ಪಕ್ಕದ ಲ್ಲಿಯೇ ಕೊಳಚೆ ನೀರು ಮಡುಗಟ್ಟಿ ನಿಂತಿದೆ. ಒಂದು ಕೊಳವೆ ಬಾವಿಯ ಪಕ್ಕದಲ್ಲಿ ಯುಜಿಡಿ ನೀರು ಮಡುಗಟ್ಟಿ ನಿಂತಿದೆ. ಈ ಹಿನ್ನೆಲೆಯಲ್ಲಿ ಹೊಸ ಜಾಗದಲ್ಲಿ ಕೊಳವೆ ಬಾವಿಗಳನ್ನು ನಿರ್ಮಾಣ ಮಾಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

    ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಹೊಸ ಜಾಗದಲ್ಲಿ ಮೂರು ಕೊಳವೆ ಬಾವಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೊರೆಸಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಅಲ್ಲಿಯವರೆಗೆ ಮೈಸೂರು ನಗರ ಪಾಲಿಕೆಯಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

    ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಮದಲ್ಲಿ ಕೆಲವು ಖಾಸಗಿ ಕೊಳವೆ ಬಾವಿಗಳು ಹಾಗೂ ಖಾಸಗಿ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದೆ. ಅಲ್ಲಿನ ನೀರು ಸೇವಿಸಿದ ಯಾರು ಸಹ ಅಸ್ವಸ್ಥಗೊಂಡಿಲ್ಲ. ಹೀಗಾಗಿ ಗ್ರಾಮಕ್ಕೆ ಪೂರೈಕೆಯಾಗುತ್ತಿರುವ ನೀರು ಸೇವಿಸಿ ಎಲ್ಲರು ಅಸ್ವಸ್ಥಗೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts