

ಕಾರ್ಕಳ: ಬದುಕಲು ಹಣ ಮಾತ್ರ ಮುಖ್ಯವಲ್ಲ, ದುಡಿಯಬೇಕೆಂಬ ಇಚ್ಛಾಶಕ್ತಿ ಮುಖ್ಯ ಎಂದು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದರು.
ಬಜಗೋಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಮೂಡುಬಿದಿರೆ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ರಜತ ಮಹೋತ್ಸವ ಸಮಾರಂಭ ಮತ್ತು ಸ್ವಾವಲಂಬನೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮೂಡಬಿದ್ರೆ ಜೈನ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಸ್ವಾವಲಂಬನೆ ದಿನಾಚರಣೆ ಸಂದೇಶ ನೀಡಿದರು. ಸಂಸ್ಥೆ ಅಧ್ಯಕ್ಷ ಜೇಕಬ್ ವರ್ಗಿಸ್ ಅಧ್ಯಕ್ಷತೆ ವಹಿಸಿದ್ದರು. ಆದರ್ಶ ಸಂಸ್ಥೆ ನಿರ್ದೇಶಕ ಇಮ್ಯಾನ್ಯುಯಲ್ ಮೋನಿಸ್, ಮೂಡುಬಿದಿರೆ ನವಚೇತನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷೆ ವಸಂತಿ ಶೆಟ್ಟಿ, ಮುಡಾರು ಗ್ರಾಪಂ ಅಧ್ಯಕ್ಷೆ ಶ್ರುತಿ ಡಿ.ಅತಿಕಾರಿ, ನಲ್ಲೂರು ಗ್ರಾಪಂ ಅಧ್ಯಕ್ಷ ಅಶೋಕ್ ಪೂಜಾರಿ, ಬಜಗೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೀಪಕ್ ಅತಿಕಾರಿ, ನಿಕಟಪೂರ್ವ ಅಧ್ಯಕ್ಷ ನಿತೀಶ್ ಶೆಟ್ಟಿ ಉಪಸ್ಥಿತರಿದ್ದರು. ಸುಲೋಚನಾ ಮತ್ತು ಜಯಂತಿ ಕಾರ್ಯಕ್ರಮ ನಿರೂಪಿಸಿದರು. ಯಶೋಧರ ವಂದಿಸಿದರು.