More

    ಸಂಘಗಳ ಕೆಲಸ ಮಾನವೀಯ ನೆಲೆಗಟ್ಟಿನಲ್ಲಿರಬೇಕು

    ತರೀಕೆರೆ: ಸಂಘ ಸಂಸ್ಥೆಗಳು ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

    ಭಾನುವಾರ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಕನಕ ನೌಕರರ ಸಂಘದಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಸೇವಾದೀಕ್ಷೆ, ನಿವೃತ್ತ ನೌಕರರು ಮತ್ತು ಶಾಸಕರಿಗೆ ಸನ್ಮಾನ, ತಾಲೂಕು ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕನಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
    ಜನರ ಸಮಸ್ಯೆ ಅರಿತು ಕೆಲಸ ಮಾಡಬೇಕು. ವೃತ್ತಿಯಲ್ಲಿ ಶಿಸ್ತು ಪಾಲನೆ, ಕಾರ್ಯದಕ್ಷತೆ ಮೂಲಕ ಹೆಸರು ಸಂಪಾದಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಮನ್ವಯದಿಂದ ಕೆಲಸ ಮಾಡಿದರೆ ಕ್ಷೇತ್ರದ ಅಭಿವೃದ್ಧಿ ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
    ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಚುನಾವಣೆ ಪೂರ್ವ ನೀಡಿದ್ದ ಭರವಸೆ ಈಡೇರಿಸುತ್ತಿದ್ದು, ಸದ್ಯದಲ್ಲೇ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದೆ. ಕ್ಷೇತ್ರದ ಜ್ವಲಂತ ಸಮಸ್ಯೆಗಳ ಅರಿವಿದ್ದು, ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
    ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ನೌಕರ ವರ್ಗ ರಚಿಸಿರುವ ಸಂಘದ ಕಾರ್ಯ ಸಮಾಜಮುಖಿಯಾಗಿದೆ. ಸ್ವಾರ್ಥವೇ ಪ್ರಧಾನವಾಗುತ್ತಿರುವ ಸನ್ನಿವೇಶದಲ್ಲಿ ಇಂಥ ದೂರಗಾಮಿ ಚಿಂತನೆ ಶ್ಲಾಘನೀಯ. ಇಂಥ ಸೇವೆ ನಿರಂತರವಾದರೆ ಮುಂದಿನ ಪೀಳಿಗೆಗೂ ಮಾದರಿಯಾಗಲಿದೆ ಎಂದು ಹೇಳಿದರು.
    ಅಜ್ಜಂಪುರ ತಾಲೂಕು ಮುಗುಳಿ ಗ್ರಾಮದ ಸಮಾಜ ಸೇವಕ ಬಿ.ಎಸ್.ಮಂಜಯ್ಯ ಅವರಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಕನಕ ನೌಕರರ ಸಂಘದ ಪದಾಧಿಕಾರಿಗಳಿಗೆ ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಅಧಿಕಾರ ಹಸ್ತಾಂತರಿಸಿದರು.
    ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಟಿ.ಎಂ.ದೇವರಾಜ್, ಬಿಇಒ ಟಿ.ಗೋವಿಂದಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್‌ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್, ತಾಲೂಕು ಕನಕ ನೌಕರರ ಸಂಘದ ನೂತನ ಅಧ್ಯಕ್ಷ ಸಿ.ಎಸ್.ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಟಿ.ತಿಪ್ಪೇಶಪ್ಪ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ರವಿ ದಳವಾಯಿ, ಉಪಾಧ್ಯಕ್ಷ ಕೆ.ಕೆಂಪರಂಗಯ್ಯ, ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts