ಧರ್ಮಸ್ಥಳ ಯೋಜನೆಯ ಕಾರ್ಯ ಮೌಲ್ಯಯುತ: ಶಾಸಕ ಅಶೋಕ್ ರೈ ಅಭಿಪ್ರಾಯ

Ism_Agriculture
Published on

ಪುತ್ತೂರು ಗ್ರಾಮಾಂತರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯಕ್ರಮಗಳು ವಿಶಿಷ್ಟವಾಗಿದ್ದು, ಎಲ್ಲವೂ ಮೌಲ್ಯಾಧಾರಿತವಾದುದು. ಪ್ರತಿಯೊಂದು ಕಾರ್ಯಕ್ರಮ ಮೌಲ್ಯಯುತವಾಗಿ, ಪರಿಣಾಮಕಾರಿಯಾಗಿ ತಳಮಟ್ಟದ ಜನರನ್ನು ಮುಟ್ಟುವಂತದ್ದು. ಕೃಷಿಯಲ್ಲಿ ತಾಂತ್ರಿಕತೆ ತರುವ ಕೆಲಸವೂ ಯೋಜನೆಯಿಂದ ನಡೆಯುತ್ತಿದೆ ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿನ ಕಮಲ ಎಂಬುವರಿಗೆ ಸೇರಿದ ಕಳೆದ 15 ವರ್ಷಗಳಿಂದ ಹಡಿಲು ಬಿದ್ದಿದ್ದ ಗದ್ದೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ತಾಲೂಕು ನೇತೃತ್ವದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಶನಿವಾರ ನಡೆದ ಹಡಿಲು ಭೂಮಿಯಲ್ಲಿ ಯಾಂತ್ರೀಕೃತ ಭತ್ತ ನಾಟಿಯ ‘ಯಂತ್ರಶ್ರೀ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ವಾತ್ಸಲ್ಯನಿಧಿ ಕಿಟ್‌ಗಳನ್ನು ಶಾಸಕರು ವಿತರಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ಯಂತ್ರಶ್ರೀ ಫಲಾನುಭವಿಗಳಿಗೆ ಸಸಿ ಮುಡಿ ಹಸ್ತಾಂತರಿಸಿದರು.

ಪುತ್ತೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಯಶಸ್, ಅರ್ಯಾಪು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಯೋಜನೆ ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಕೃಷಿ ಯಂತ್ರಧಾರೆ ಪುತ್ತೂರು-ಸುಳ್ಯ ವಿಭಾಗೀಯ ಕಚೇರಿ ಯೋಜನಾಧಿಕಾರಿ ಮೋಹನ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ ವಂದಿಸಿದರು. ಯೋಜನೆ ತಾಲೂಕು ಕೃಷಿ ಮೇಲ್ವಿಚಾರಕ ಉಮೇಶ್ ಬಿ ನಿರೂಪಿಸಿದರು.

ನೇಜಿ ನಾಟಿ ಪ್ರಾತ್ಯಕ್ಷಿಕೆ

ನೇಜಿ ನಾಟಿ ಪ್ರಾತ್ಯಕ್ಷಿಕೆ ನಡೆಯಿತು. ಒಕ್ಕೂಟದ ಹಾಲಿ ಮತ್ತು ಮಾಜಿ ಪದಾಧಿಕಾರಿಗಳು, ಬಲ್ನಾಡು ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು, ಸೇವಾ ಪ್ರತಿನಿಧಿಗಳು,ಯಂತ್ರಶ್ರೀ ಯೋಧರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net