ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ

vidyanidhi
vidyanidhi
Published on

ಕೋಟ: ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ವಾತಲ್ಲ. ಯೋಜನೆಯನ್ನು ನಿರಂತರವಾಗಿ ಮುಂದುವರಿಸುವುದು ಸವಾಲಿನ ಕಾರ್ಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು.

ಕೋಟದ ಪಂಚವರ್ಣ ಯುವಕ, ಮಹಿಳಾ ಮಂಡಲದ ಡಾ.ಪುನೀತ್‌ರಾಜ್ ಕುವಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ 6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ಹಸ್ತಾಂತರಿಸಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಮಣೂರು ಸ್ನೇಹಕೂಟ ಸಂಚಾಲಕಿ ಭಾರತಿ ವಿ.ಮಯ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲದ ವಾಜಿ ಟ್ರಸ್ಟಿ ಕೆ.ಪಿ.ಶೇಖರ್, ಪಂಚವರ್ಣ ಮಹಿಳಾ ಮಂಡಲ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಟನೆ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಸಂದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿದರು. ಮಹಿಳಾ ಮಂಡಲ ಸಂಚಾಲಕಿ ಸುಜಾತಾ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net