More

    ರೋಟರಿ ಸಂಸ್ಥೆ ಕಾರ್ಯ ಶ್ಲಾಘನೀಯ

    ಮದ್ದೂರು: ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರೋಟರಿ ಸಂಸ್ಥೆ ಇದೀಗ ಶೈಕ್ಷಣಿಕ ಕ್ಷೇತ್ರದತ್ತ ಮುಖ ಮಾಡಿರುವುದು ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

    ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ರೋಟರಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸರ್ಕಾರಿ ಶಾಲೆ ಹೆಣ್ಣು ಮಕ್ಕಳಿಗೆ ಬೈಸಿಕಲ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರೋಟರಿ ಸಂಸ್ಥೆ ಹೆಣ್ಣು ಮಕ್ಕಳನ್ನು ಗುರುತಿಸಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಹೆಣ್ಣು ಮಕ್ಕಳಿಗೆ ಬೈಸಿಕಲ್ ವಿತರಿಸುತ್ತಿರುವುದು ಮೆಚ್ಚುಗೆಯ ವಿಷಯ ಎಂದು ಹೇಳಿದರು.

    ಮಾಲಗಾರನಹಳ್ಳಿ ಹಾಗೂ ಆಬಲವಾಡಿ ಸರ್ಕಾರಿ ಶಾಲೆಯ 34 ಹೆಣ್ಣು ಮಕ್ಕಳಿಗೆ ಉಚಿತವಾಗಿ ಬೈಸಿಕಲ್ ವಿತರಿಸಲಾಯಿತು. ಮದ್ದೂರು ರೋಟರಿ ಸಂಸ್ಥೆಯ ಅಧ್ಯಕ್ಷ ಎಂ.ಸಿ.ಶಶಿಗೌಡ, ಕಾರ್ಯದರ್ಶಿ ಚನ್ನಂಕೆಗೌಡ, ಮಾಜಿ ಅಧ್ಯಕ್ಷರಾದ ಹೊನ್ನೇಗೌಡ, ಶಿವಣ್ಣ, ರಾಜೇಶ್, ಕುಮಾರ, ಪ್ರವೀಣ್ ಹಾಗೂ ಪಿಡಿಒ ಅಶ್ವಿನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts