More

    ರೋಟರಿ ಸಂಸ್ಥೆ ಕಾರ್ಯ ಶ್ಲಾಘನೀಯ

    ಧಾರವಾಡ: ಕರೊನಾ ವಿರುದ್ಧದ ಹೋರಾಟದಲ್ಲಿ ರೋಟರಿ ಕ್ಲಬ್ ಸೇರಿ ಇತರ ಸಂಘ-ಸಂಸ್ಥೆಗಳ ಸಮಾಜ ಸೇವೆ ಮಾದರಿಯಾಗಿದೆ. ದುರ್ಬಲ ಹಾಗೂ ಬಡವರ ಏಳಿಗೆಗೆ ಸಂಸ್ಥೆಗಳು ಶ್ರಮಿಸುತ್ತಿವೆ. ಜನರ ಶ್ರೇಯೋಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಹಾಗೂ ಇತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ರೋಟರಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

    ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಸಹಾಯಧನದಲ್ಲಿ ನೂತನವಾಗಿ ನಿರ್ವಿುಸಿರುವ ಜಯಾ ಮತ್ತು ರವಿ ಭೂಪಳಾಪುರ ರೋಟರಿ ಕೋವಿಡ್-19 ಐಸಿಯು ವಾರ್ಡ್ ಅನ್ನು ಶುಕ್ರವಾರ ಉದ್ಘಾಟಿಸಿ, ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿ ಅವರು ಮಾತನಾಡಿದರು.

    ರೋಟರಿ ಸಂಸ್ಥೆಯು ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಜನರಿಗೆ ಸೇವೆ ತಲುಪಿಸುತ್ತಿರುವುದು ಎಲ್ಲರಿಗೂ ಅನುಕೂಲವಾಗಿದೆ. ಆಸ್ಪತ್ರೆ ಸಿಬ್ಬಂದಿ ಈ ವಾರ್ಡ್ ಅನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಸಾಮಾನ್ಯ ಜನರಿಗೆ ಆರೋಗ್ಯ ಸೇವೆ ನೀಡಬೇಕು ಎಂದರು.

    ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ. ಕವನ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಸೀಮಾ ಮಸೂತಿ, ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ, ರೋಟರಿ ಸಂಸ್ಥೆಯ ಡಾ. ರಾಜನ್ ದೇಶಪಾಂಡೆ, ರವಿ ದೇಶಪಾಂಡೆ, ಸುನೀಲ ಬಾಗೇವಾಡಿ, ಡಾ. ಗಿರೀಶ ಮಾಸೂರಕರ, ಕರಣ ದೊಡ್ಡವಾಡ, ಕಿರಣ ಹಿರೇಮಠ, ಮಾರ್ತಾಂಡಪ್ಪ ಕತ್ತಿ, ಸದಸ್ಯರು, ಜಿಲ್ಲಾ ಆಸ್ಪತ್ರೆ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts