ಯುವ ಸಮುದಾಯಕ್ಕೆ ಪ್ರಾತಿನಿಧ್ಯ ಅಗತ್ಯ

ಅರಸೀಕೆರೆ: ಕೌಟುಂಬಿಕ ನಿರ್ವಹಣೆಯ ಮಹತ್ವವನ್ನು ಹಿರಿಯ ಸದಸ್ಯರು ಕಿರಿಯರಿಗೆ ಮನವರಿಕೆ ಮಾಡಿಕೊಟ್ಟಲ್ಲಿ ನೆಮ್ಮದಿ ಕಂಡುಕೊಳ್ಳಬಹುದು ಎಂದು ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅರಳಿ ನಾಗರಾಜ್ ಗಂಗಾವತಿ ಹೇಳಿದರು.

ಹಿರಿಯ ನಾಗರಿಕರ ವೇದಿಕೆ ವತಿಯಿಂದ ನಗರದ ಕಲಾ ಭವನದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಬದುಕು ಮತ್ತು ಹೊಣೆಗಾರಿಕೆ ಕುರಿತು ಉಪನ್ಯಾಸ ನೀಡಿದರು.

ಮಕ್ಕಳು ಅಡ್ಡದಾರಿ ಹಿಡಿಯುತ್ತಾರೆ ಎನ್ನುವ ಕಾರಣದಿಂದ ಕುಟುಂಬದ ಹಿರಿಯ ಸದಸ್ಯರು ಹೊಣೆಗಾರಿಕೆ ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಪ್ರವೃತ್ತಿಯಿಂದ ಹೊರಬಂದು ಯುವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಜತೆಗೆ ನಿವೃತ್ತಿ ನಂತರ ಬದುಕು ಮುಗಿಯಿತು ಎನ್ನುವ ಭಾವನೆಯಿಂದ ಎಲ್ಲರೂ ಹೊರಬರಬೇಕು ಎಂದು ಸಲಹೆ ನೀಡಿದರು.

ನಗರಸಭೆ ಪೌರಾಯುಕ್ತ ಚಲಪತಿ ಮಾತನಾಡಿ, ಹಿರಿಯ ನಾಗರಿಕರಿಗಾಗಿ ಉತ್ತಮ ಪುಸ್ತಕಗಳನ್ನು ತರಿಸಲಾಗಿದೆ. ಜತೆಗೆ ನಗರಸಭೆಯಲ್ಲಿ ಕಂದಾಯ ಪಾವತಿ ಸೇರಿದಂತೆ ಇತರೆ ಕಾರ್ಯಗಳಿಗೆ ಬರುವ ಹಿರಿಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ವೇದಿಕೆ ಗೌವರಾಧ್ಯಕ್ಷ ಚನ್ನಬಸಪ್ಪ, ಉಪಾಧ್ಯಕ್ಷ ರಾಮಚಂದ್ರ, ರೈಲ್ವೆ ಮಹದೇವ್, ಸೇರಿದಂತೆ ಹಲವರು ಇದ್ದರು.

ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅರಳಿ ನಾಗರಾಜ್ ಗಂಗಾವತಿ ಹಾಗೂ ಪೌರಾಯುಕ್ತ ಚಲಪತಿ ಅವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *