

ಬಂಟ್ವಾಳ: ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ(68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನರಾದರು. ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ರಂಗಭೂಮಿಯಲ್ಲಿ 30 ವರ್ಷಕ್ಕೂ ಮಿಕ್ಕಿ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುವಾರ್ ಕೊಡಿಯಾಲ್ ಬೈಲ್‌ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ವಾಡುತ್ತಿದ್ದರು. ವಿಜಯಕುವಾರ್ ಕೊಡಿಯಾಲ್‌ಬೈಲ್ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾವಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ ‘ಶಿವದೂತ ಗುಳಿಗೆ’ ನಾಟಕದ ಭೀವಾರಾವ್ ಪಾತ್ರ ಅವರಿಗೆ ಹೆಸರನ್ನು, ಹೊಸ ಇಮೇಜನ್ನು ತಂದು ಕೊಟ್ಟಿದೆ. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರ ಗಮನ ಸೆಳೆದಿತ್ತು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.
ವಿಜಯಕುವಾರ್ ಕೊಡಿಯಾಲ್‌ಬೈಲ್ ಕಲಾಸಂಗಮ ತಂಡದಲ್ಲಿ ಸುದೀರ್ ಕಾಲ ತನ್ನ ವೃತ್ತಿ ಪಯಣವನ್ನು ನಡೆಸಿದ ಅವರು ಆ ತಂಡದ ಹಿರಿಯ ಹಾಗೂ ಪ್ರಮುಖ ಕಲಾವಿದರಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ನಾಟಕವೊಂದರಲ್ಲಿ ಅಭಿನಯಿಸಿ ಮನೆಗೆ ಮರಳಿದ್ದ ರಮೇಶ್ ಕಲ್ಲಡ್ಕ ಅವರ ನಿಧನಕ್ಕೆ ತುಳುರಂಗಭೂಮಿ ಆಘಾತಗೊಂಡಿದೆ. ಒರಿಯರ್ದೊರಿ ಅಸಲ್, ಮದಿಮೆ ಸಹಿತ ಕೊಡಿಯಾಲ್ ಬೈಲ್ ಅವರ ಜನಪ್ರಿಯ ತುಳು ನಾಟಕಗಳಲ್ಲಿ ರಮೇಶ್ ಅವರು ಗಮನ ಸೆಳೆದಿದ್ದರೆ, ಇತ್ತೀಚಿನ ಶಿವದೂತಗುಳಿಗೆ, ಶಿವಾಜಿ ನಾಟಕಗಳು ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ಸಾವಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದ ಅವರು ಕಲ್ಲಡ್ಕ ಪರಿಸರದ ಶಾರದೋತ್ಸವ ಸಮಿತಿ ಸಹಿತ ವಿವಿಧ ಸಂ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಶಾರದೋತ್ಸವ ಸಮಿತಿಯ ಸ್ಥಾಪಕ ಟ್ರಸ್ಟಿಯಾಗಿದ್ದರು. ಉತ್ತಮ ನಿರೂಪಕರಾಗಿ ಗುರುತಿಸಿಕೊಂಡಿದ್ದರು.
1957 ಏಪ್ರಿಲ್‌ನಲ್ಲಿ ಜನಿಸಿದ ಅವರು, ಶಾಂತಾರಾಮ ಕಲ್ಲಡ್ಕರ ಮಿತ್ರಬಳಗ ಕಲಾತಂಡದ ಮೂಲಕ ತನ್ನ ರಂಗಪಯಣವನ್ನು ಎಳವೆಯಲ್ಲೇ ಆರಂಭಿಸಿದ್ದರು. ಬಳಿಕ ಶಾಂತಾರಾಮ ಕಲ್ಲಡ್ಕ ಅವರ ತುಳುವಪ್ಪೆ ಜೋಕುಲು ಕಲಾಬಳಗದಲ್ಲೂ ತೊಡಗಿಸಿಕೊಂಡ ರಮೇಶ್, ತುಳು ವೃತ್ತಿ ರಂಗಭೂಮಿ ಪ್ರವೇಶಿಸಿದರು. ಬಳಿಕ ಕಲ್ಲಡ್ಕದಲ್ಲಿ ಮೈತ್ರಿ ಕಲಾವಿದರು ತಂಡ ಸ್ಥಾಪಿಸಿ, ಕಲ್ಲಡ್ಕ ಶಾರದೋತ್ಸವದಲ್ಲಿ ತಂಡದ ನಾಟಕ ಪ್ರದರ್ಶಿಸುತ್ತಿದ್ದರು.