ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್​ ಇನ್ನಿಲ್ಲ

subhadramma manssor
Published on

ಬೆಂಗಳೂರು: ಖ್ಯಾತ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್​ (81) ಬುಧವಾರ ಬಳ್ಳಾರಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ಧಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಾಧಿತರಾಗಿದ್ದರು.

ಬಳ್ಳಾರಿಯ ರೇಡಿಯೋ ಪಾರ್ಕ್​ ಪ್ರದೇಶದಲ್ಲಿರುವ ಮನೆಯಲ್ಲಿ ರಾತ್ರಿ 11.30ರಲ್ಲಿ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ವಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಇವರ ಪತಿ ಲಿಂಗರಾಜ ಮನ್ಸೂರ್​ ನಿಧನರಾಗಿದ್ದರು. ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಇವರು ಅಗಲಿದ್ದಾರೆ.

ಪ್ರಶಸ್ತಿಗಳು ಹಲವು: ಸುದೀರ್ಘ ಕಾಲ ರಂಗಭೂಮಿ ಸೇವೆ ಸಲ್ಲಿಸಿದ್ದ ಸುಭದ್ರಮ್ಮ ಮನ್ಸೂರ್​ ಅವರನ್ನು ಹುಡುಕಿಕೊಂಡು ಹಲವು ಪ್ರಶಸ್ತಿಗಳು ಒಲಿದು ಬಂದಿದ್ದವು. ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿ ಇನ್ನೂ ಹಲವು ಪ್ರಶಸ್ತಿಗಳಲ್ಲದೆ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್​ ಅನ್ನೂ ಪಡೆದುಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net