More

    ತಹಶೀಲ್ದಾರ್ ಮನೆಯಲ್ಲಿದ್ದ 25 ತೊಲ ಚಿನ್ನ ಕಳವು; ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು

    ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ.

    ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಈ ಕಳ್ಳತನ ನಡೆದಿದೆ.

    ತಹಶೀಲ್ದಾರರ ಮನೆಯಲ್ಲಿದ್ದ 25 ತೊಲ ಬಂಗಾರ, 20 ತೊಲ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದೇ ವಾರದಲ್ಲಿ ಗೋಕಾಕ್​ನಲ್ಲಿ ನಾಲ್ಕು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

    ರೈಲ್ವೇ ಪ್ಲ್ಯಾಟ್​ಫಾರ್ಮ್​ನಲ್ಲೇ ಬಿದ್ದಿತ್ತು 100 ಗ್ರಾಂ ಚಿನ್ನಾಭರಣವಿದ್ದ ಬಾಕ್ಸ್; ಆಮೇಲಾಗಿದ್ದೇನು?

    ಬೇಕರಿ ಪ್ರಕರಣದ ಹಿಂದೆ ಸುಪಾರಿ!; ಎಲ್ಲ ಆರೋಪಿಗಳನ್ನೂ ಬಂಧಿಸುವಂತೆ ಆಗ್ರಹ, ತಪ್ಪಿದರೆ ಮತ್ತೆ ಪ್ರತಿಭಟನೆ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts