ತಹಶೀಲ್ದಾರ್ ಮನೆಯಲ್ಲಿದ್ದ 25 ತೊಲ ಚಿನ್ನ ಕಳವು; ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಈ ಕಳ್ಳತನ ನಡೆದಿದೆ. … Continue reading ತಹಶೀಲ್ದಾರ್ ಮನೆಯಲ್ಲಿದ್ದ 25 ತೊಲ ಚಿನ್ನ ಕಳವು; ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು