More

  ವಿವಿಧೆಡೆ ಕಳ್ಳತನ, ಅಪ್ರಾಪ್ತ ಸೇರಿ ಇಬ್ಬರ ಬಂಧನ

  ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಳ್ಳತನ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು 5.20 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಬೈಕ್ ಮತ್ತು ಮೊಬೈಲ್ ಅನ್ನು ಜಪ್ತಿ ಮಾಡಿದ್ದಾರೆ.

  ಸಾಗರ ಟೌನ್‌ನ ಎಸ್.ಎನ್.ನಗರದ ಷಣ್ಮುಖ ಅಲಿಯಾಸ್ ರೆಡ್ಡಿ (22) ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರು. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಮೇಲ್ವಿಚಾರಣೆಯಲ್ಲಿ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಮಹಾಬಲೇಶ್ವರ ನೇತೃತ್ವದಲ್ಲಿ ಪಿಎಸ್‌ಐಗಳಾದ ನಾರಾಯಣ ಮಧುಗಿರಿ, ಸುಜಾತ, ಸಿದ್ದರಾಮಪ್ಪ, ಸಿಬ್ಬಂದಿಗಳಾದ ಸನಾವುಲ್ಲಾ, ಫೈರೋಜ್ ಅಹಮದ್, ರವಿಕುಮಾರ್, ಪ್ರವೀಣ್‌ಕುಮಾರ್, ಗಿರೀಶ್ ಬಾಬು ಹಾಗೂ ಎಸ್ಪಿ ಕಚೇರಿ ತಾಂತ್ರಿಕ ಸಿಬ್ಬಂದಿಗಳಾದ ಗುರುರಾಜ, ಇಂದ್ರೇಶ್ ಮತ್ತು ವಿಜಯ್ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಭಾನುವಾರ ಆರೋಪಿಗಳನ್ನು ಬಂಧಿಸಿದೆ.
  ಆರೋಪಿಗಳು ಸಾಗರ ತಾಲೂಕಿನ ಕರ್ಕಿಕೊಪ್ಪ ಗ್ರಾಮದ ಕಳ್ಳತನಕ್ಕೆ ಯತ್ನ ಪ್ರಕರಣ, ಉಂಬ್ಳೆಬೈಲು, ಯಳವರಸೆ, ಕಾನ್ಲೆ ಮತ್ತು ಆನಂದಪುರ ಠಾಣಾ ವ್ಯಾಪ್ತಿಯ ನೇದರವಳ್ಳಿ ಗ್ರಾಮದಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು 4.18 ಲಕ್ಷ ರೂ. ಮೌಲ್ಯದ 51 ಗ್ರಾಂ ಬಂಗಾರ, 1 ಸಾವಿರ ರೂ. ಮೌಲ್ಯದ 20 ಗ್ರಾಂ ಬೆಳ್ಳಿ, ಒಂದು ಮೊಬೈಲ್ ಮತ್ತು 1 ಲಕ್ಷ ರೂ. ಮೌಲ್ಯದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts