ಹುಬ್ಬಳ್ಳಿ: ಕೀಲಿ ಮುರಿದು ಮನೆಯಲ್ಲಿದ್ದ 3.54 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಇಲ್ಲಿನ ಗೋಕುಲ ರಸ್ತೆಯ ಮಂಜುನಾಥ ನಗರದಲ್ಲಿ ನಡೆದಿದೆ. ವೀರಪ್ಪ ಮಂಗಳೂರು ಎಂಬುವರ ಮನೆಯಲ್ಲಿದ್ದ 3.17 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, 550 ಗ್ರಾಂ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
