ದೇವಸ್ಥಾನದಿಂದ ಕಳವು

Btw_Theft

ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿಯೇ ಇರುವ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಕಳ್ಳರು ನುಗ್ಗಿ ಚಿನ್ನ ಬೆಳ್ಳಿ ಸಹಿತ ಹುಂಡಿಯಲ್ಲಿದ್ದ ಕಾಣಿಕೆಯನ್ನು ದೋಚಿ ಪರಾರಿಯಾಗಿದ್ದಾರೆ. ಮೂರು ಮಂದಿ ಕಳ್ಳರು ದೇವಸ್ಥಾನದ ಒಳನುಗ್ಗಿ ಗರ್ಭಗುಡಿ ಪ್ರವೇಶಿಸಿ ಸೊತ್ತುಗಳನ್ನು ಕಳವುಗೈಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುಜೀರ್‌ಕಾರ್ಸ್‌ ಕುಟುಂಬಕ್ಕೆ ಸಂಬಂಧಪಟ್ಟ ದೇವಸ್ಥಾನ ಇದಾಗಿದ್ದು, ಭಾನುವಾರ ಇಲ್ಲಿ ದೀಪಾವಳಿ ಆಚರಣೆ ಸಂಭ್ರಮದಿಂದ ನಡೆದಿತ್ತು.

ಮಧ್ಯರಾತ್ರಿಯ ಬಳಿಕ ಕಳ್ಳರು ನುಗ್ಗಿ ಬೆಳ್ಳಿಯ ದೀಪಗಳು, ಗಿಂಡಿ, ಚೊಂಬು, ಪ್ರಭಾವಳಿಯ ಮೇಲಿಡುವ ಚಿನ್ನದ ಸಣ್ಣ ಕೊಡೆ, ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಎಗರಿಸಿದ್ದಾರೆೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಳ ಕೇಳಿದ್ದಕ್ಕೆ ಅಡುಗೆಯಾತನಿಗೆ ಹಲ್ಲೆ

ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ, ಸವಾರ ಸಾವು

 

Share This Article

ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone

ನವದೆಹಲಿ:  ( smartphone ) ಇತ್ತೀಚಿನ ದಿನಗಳಲ್ಲಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಮೊಬೈಲ್…

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…