ಕಳ್ಳತನವಾಗಿದ್ದ 245 ಮೊಬೈಲ್ ಪತ್ತೆ; ವಾರಸುದಾರರಿಗೆ ನೀಡಿದ ಎಸ್ಪಿ

ಹಾವೇರಿ: ಜಿಲ್ಲೆಯ ವಿವಿಧೆಡೆ ಕಳ್ಳತನವಾಗಿದ್ದ 245ಕ್ಕೂ ಅಧಿಕ ಮೊಬೈಲ್‌ಗಳನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸರು ಸಿಇಐಆರ್ ಪೋರ್ಟಲ್ ಮೂಲಕ ದೂರು ನೀಡಿದ ವಾರಸುದಾರರಿಗೆ ಭಾನುವಾರ ಹಸ್ತಾಂತರಿಸಿದರು.
ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕ ಕಚೇರಿ ಸಭಾಂಗಣದಲ್ಲಿ ಮೊಬೈಲ್ ಹಸ್ತಾಂತರಿಸಿದ ಬಳಿಕ ಎಸ್‌ಪಿ ಅಂಶುಕುಮಾರ ಮಾತನಾಡಿ, ಸಾರ್ವಜನಿಕರು ಮೊಬೈಲ್ ಪೋನ್‌ಗಳನ್ನು ಕಳೆದುಕೊಂಡ ಸಂದರ್ಭದಲ್ಲಿ ಪತ್ತೆ ಕಾರ್ಯವನ್ನು ಸುಲಬೀಕರಿಸಲು ಹಾಗೂ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಹತೋಟಿಗೆ ತರಲು ಸರ್ಕಾರ ಸಿ.ಇ.ಐ.ಆರ್ ಪೋರ್ಟಲ್‌ನ್ನು ಜಾರಿಗೆ ತಂದಿದೆ.
ಈ ಪೋರ್ಟಲ್ ಮುಖಾಂತರ ಸಾರ್ವಜನಿಕರು ನೇರವಾಗಿ ಸಿ.ಇ.ಐ.ಆರ್ ಅಥವಾ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ದೂರು ದಾಖಲಿಸಬಹುದಾಗಿದೆ. ಈ ಸಂಬಂಧ ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಾವು ಕಳೆದುಕೊಂಡ ಮೊಬೈಲ್‌ನ್ನು ಪತ್ತೆ ಮಾಡುವಂತೆ ಖುದ್ದು ಹಾಗೂ ಪೊಲೀಸರ ಸಹಾಯದೊಂದಿಗೆ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 2024 ಜೂ.8ರಿಂದ ಜೂ.22ರವರೆಗೆ ಒಟ್ಟು 245 ಮೊಬೈಲ್‌ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದರು.
ಮೊಬೈಲ್ ಪತ್ತೆಗಾಗಿ ಎಲ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡವನ್ನು ರಚನೆ ಮಾಡಿದ್ದು, ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿ ಪತ್ತೆ ಹಚ್ಚಿ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಮೊಬೈಲ್‌ಗಳನ್ನು ಅರ್ಹ ವಾರಸುದಾರರಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.
ಅಲ್ಲದೇ ಇನ್ನುಮುಂದೆ ಯಾರೇ ಸಾರ್ವಜನಿಕರು ಮೊಬೈಲ್‌ಗಳನ್ನು ಕಳೆದುಕೊಂಡಲ್ಲಿ ಅಂತಹವರು ತಕ್ಷಣವೇ ಸಿ.ಇ.ಐ.ಆರ್ ಪೋರ್ಟಲ್‌ನಲ್ಲಿ ಸ್ವತಃ ಮಾಹಿತಿಯನ್ನು ದಾಖಲಿಸಬೇಕು. ಇಲ್ಲಿದಿದ್ದರೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿದಲ್ಲಿ ಆದಷ್ಟು ಬೇಗ ಪತ್ತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಹೆಚ್ಚುವರಿ ಎಸ್‌ಪಿ ಸಿ. ಗೋಪಾಲ, ಡಿವೈಎಸ್‌ಪಿ ಎಂ.ಎಸ್. ಪಾಟೀಲ, ಗಿರೀಶ ಭೋಜಣ್ಣನವರ, ಕೆ. ಮಂಜುನಾಥ ಮತ್ತಿತರರು ಇದ್ದರು.

Share This Article

ಪುರುಷರು ಕುಳಿತು or ನಿಂತುಕೊಂಡು ಮೂತ್ರ ವಿಸರ್ಜನೆ ಮಾಡ್ಬೇಕಾ? ಇಲ್ಲಿದೆ ಉಪಯುಕ್ತ ಮಾಹಿತಿ… Urinate Position

ಸಾಮಾನ್ಯವಾಗಿ ಪುರುಷರು ನಿಂತುಕೊಂಡೇ ಮೂತ್ರ ವಿಸರ್ಜನೆ ( Urinate Position ) ಮಾಡುತ್ತಾರೆ. ಆದರೆ, ಈ…

ನಿಮ್ಮ ಅಂಗೈನಲ್ಲಿ H ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ! Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್‌ ಗ್ಯಾರೆಂಟಿ

ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ