16 C
Bangalore
Saturday, December 7, 2019

ಬಿಜೆಪಿಯವರು ಸಂವಿಧಾನ ವಿರೋಧಿಗಳು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ತೇರದಾಳ: ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀಣಾ ಕಾಶಪ್ಪನವರ ಶುಕ್ರವಾರ ಭರ್ಜರಿ ಪ್ರಚಾರ ನಡೆಸಿದರು. ಆರಾಧ್ಯ ದೈವ ಅಲ್ಲಮಪ್ರಭು ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಮರ ದರ್ಶನ ಪಡೆದರು. ನಂತರ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು.

ಅಭ್ಯರ್ಥಿ ವೀಣಾ ಮಾತನಾಡಿ, ತೇರದಾಳ ತಾಲೂಕು ಘೋಷಣೆ ಕೀರ್ತಿ ಸಮ್ಮಿಶ್ರ ಸರ್ಕಾರಕ್ಕೆ ಸಲ್ಲುತ್ತದೆ. ಜಿಲ್ಲೆ ಮತ್ತು ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತಹಾಕಿ ಎಂದರು.

ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ಬಿಜೆಪಿಯವರು ಸಂವಿಧಾನ, ಜನ ವಿರೋಧಿಗಳು. ಬ್ರಿಟಿಷರು ದೇಶ ಬಿಟ್ಟು ಹೊದ್ರಪ್ಪ ಅನ್ಕೊಂಡ್ರೆ ಬ್ರಿಟಿಷರ ತುಂಡುಗಳು ನಮ್ಮ-ನಿಮ್ಮನ್ನು ಬೇರೆ ಮಾಡುತ್ತಿದ್ದಾರೆ. ಎಲ್ಲರೂ ಒಂದಾಗಿ ಬದುಕಬೇಕಾದರೆ ಜಾತ್ಯತೀತ ಶಕ್ತಿಗಳ ಜತೆಗೆ ನೀವೂ ಕೈಜೊಡಿಸಬೇಕು ಎಂದರು.

ಎಸ್.ಆರ್. ಪಾಟೀಲ, ಬಸವರಾಜ ಕೊಣ್ಣೂರ, ಸಂಗಮೇಶ ಹಿಪ್ಪರಗಿ, ವಿಜಯಾನಂದ ಕಾಶಪ್ಪನವರ, ಬುಜಬಲಿ ಕೆಂಗಾಲಿ ಮಾತನಾಡಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಪಾರಸಮಲ್ ಜೈನ, ಮುತ್ತಣ್ಣ ಹಿಪ್ಪರಗಿ, ಪ್ರವೀಣ ನಾಡಗೌಡ, ಡಾ.ದಡ್ಡೆನ್ನವರ, ಎ.ಆರ್.ಬೆಳಗಲಿ, ಶ್ರೀನಾಥ ಮುಂಡಾ ಇತರರಿದ್ದರು.

ಪ್ರಚಾರ ಮುಖ್ಯವಲ್ಲ ಕೆಲಸ ಮುಖ್ಯ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೀಣಾ ಕಾಶಪ್ಪನವರ ಪ್ರಚಾರ ಬಯಸಲ್ಲ ಎಂಬ ಗದ್ದಿಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಚಾರ ಪಡೆಯೋದು ದೊಡ್ಡದಲ್ಲ. ಏನು ಕೆಲಸ ಮಾಡಿದ್ದಾರೆಂಬುದು ಮುಖ್ಯ ಎಂದು ತಿರುಗೇಟು ನೀಡಿದರು.

ಬರ ಬಂದಾಗ ಜಿಪಂ ವ್ಯಾಪ್ತಿಯಲ್ಲಿ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಕೆಲಸ ಮಾಡಲಾಗಿದೆ. ಗದ್ದಿಗೌಡರ ಅವರು ಸರ್ಕಾರದ ಯೋಜನೆ ಬಿಟ್ಟು ಜಿಲ್ಲೆಗೆ ಏನು ತಂದಿದ್ದಾರೆ. ಜಿಲ್ಲೆಯಲ್ಲಿ ಕೃಷಿಕರು, ನೇಕಾರರು, ನಿರುದ್ಯೋಗಿಗಳು, ಮಹಿಳೆಯರ ಸಾಕಷ್ಟು ಸಮಸ್ಯೆ ಇರಬೇಕಾದರೆ ಅಭ್ಯರ್ಥಿಯಾಗಿ ತಾವೂ ಮಾಡಿದ ಕೆಲಸ ಹೇಳಿಕೊಳ್ಳುವುದಿಲ್ಲ ಎಂದು ಟಾಂಗ್ ನೀಡಿದರು.

ಸಂಸತ್ ಸದಸ್ಯೆಯಾದರೆ ಅನೇಕ ಅಭಿವೃದ್ಧಿ ಯೋಜನೆ ಮಾಡುವ ಚಿಂತನೆ ಹಾಕಿಕೊಂಡಿದ್ದೇನೆ. ನಿರುದ್ಯೋಗ ಹೊಗಲಾಡಿಸುವುದು, ಮಹಿಳಾ ಗಾರ್ಮೇಂಟ್ ಕಾರ್ಖಾನೆ, ನೇಕಾರರಿಗಾಗಿ ಜವಳಿಪಾರ್ಕ್, ಕೃಷಿಕರ ಕೆಲಸಕ್ಕಾಗಿ ಧ್ವನಿ ಎತ್ತೋದು. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.





Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...