18.5 C
Bangalore
Monday, December 16, 2019

ಕಲಿಸಿದ ಗುರುಗಳನ್ನು ಗೌರವಿಸಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ತೇರದಾಳ: ಕಲಿಸಿದ ಗುರುಗಳನ್ನು ಗೌರವಿಸಿ ಮೂವತ್ತು ವರ್ಷಗಳ ಹಿಂದಿನ ಸ್ನೇಹಿತರೆಲ್ಲರೂ ಒಂದಾಗುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದು ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.

ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಪ್ರಭುಲಿಂಗ ಪಿಯು ಕಾಲೇಜಿನ 1988-89ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ, ಗುರುವಂದನೆ ಹಾಗೂ ಗಾನ ವಿನೋದ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಂಸ್ಥೆ ಆಡಳಿತಾಧಿಕಾರಿ ಬಿ.ಆರ್. ಪಾಟೀಲ ಮಾತನಾಡಿ, ಬಿಎಲ್‌ಡಿಇ ಸಂಸ್ಥೆಯಲ್ಲಿ ಕಲಿತ ಪ್ರತಿಯೋರ್ವ ವಿದ್ಯಾರ್ಥಿ ಬದುಕಿನಲ್ಲಿ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಸಂಸ್ಥೆ ಏಳಿಗೆಗೆ ಶಿಕ್ಷಕರ ಕೊಡುಗೆ ಅಪಾರ ಎಂದು ಹೇಳಿದರು.

ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಚೇರ್ಮನ್ ರಮೇಶ ಅವರಾದಿ, ಕಲ್ಮೇಶ್ವರ ಶರಣರು ಮಾತನಾಡಿದರು. ಈರಪ್ಪ ಯಾದವಾಡ, ಪ್ರವೀಣ ನಾಡಗೌಡ, ಪರಪ್ಪ ಕಾಲತಿಪ್ಪಿ, ರವಿ ಅವರಾದಿ, ಸುಭಾಷ ಹಂಜಿ, ಮಲ್ಲಪ್ಪ ಮುಕರಿ ಇತರರಿದ್ದರು.

1988-89ನೇ ಸಾಲಿನಲ್ಲಿ ತಮಗೆ ಶಿಕ್ಷಣ ನೀಡಿದ ಅರವಿಂದ ಮನಗೊಂಡ, ಎಸ್.ಎಂ. ಯರನಾಳ, ಮಠ, ಐ.ಪಿ. ಮಾಳಿ, ಸಿ.ಜಿ. ಬೆಳಗಲಿ, ಯಡಹಳ್ಳಿ ಸೇರಿ ಹಲವರನ್ನು ಸನ್ಮಾನಿಸಲಾಯಿತು. ಮಹಾದೇವ ನ್ಯಾಮಗೌಡ ಪ್ರಾಸ್ತಾವಿಕ ಮಾತನಾಡಿದರು. ಕಾವ್ಯ ಬುರ್ಶಿ ಪ್ರಾರ್ಥಿಸಿದರು. ದಯಾನಂದ ಮಲಾಬದಿ ಸ್ವಾಗತಿಸಿದರು. ಎಂ.ಕೆ. ಮೇಗಾಡಿ ನಿರೂಪಿಸಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...