More

    ದೆಹಲಿಯ ಜನರು ಭಯ ಪಡುವ ಅವಶ್ಯಕತೆಯಿಲ್ಲ, ಸಮವಸ್ತ್ರದಲ್ಲಿರುವ ಪೊಲೀಸರನ್ನು ನೀವು ನಂಬಬೇಕು: ಅಜಿತ್​ ದೋವಲ್​

    ವದೆಹಲಿ: ರಾಜ್ಯದ ಈಶಾನ್ಯ ಭಾಗದಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯ ಕಿಚ್ಚು ಹತ್ತಿದ್ದು ಹಿಂಸಾಚಾರ ಹೆಚ್ಚಿದೆ. ಆದರೆ ಇದರಿಂದಾಗಿ ಜನರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇಲ್ಲ, ನಮ್ಮಲ್ಲಿ ಸಾಕಷ್ಟು ಭದ್ರತಾ ಪಡೆ ಇದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ತಿಳಿಸಿದ್ದಾರೆ.

    ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಚಳವಳಿಯಿಂದಾಗಿ 20 ಜನರು ಸಾವನ್ನಪ್ಪಿದ್ದರೆ. 150ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದಾರೆ. ದೆಹಲಿ ಪೊಲೀಸರ ನಿಷ್ಕ್ರಿಯತೆ ಮತ್ತು ಅಸಮರ್ಪಕ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದ ಕಾರಣದಿಂದಾಗಿಯೇ ಇಂತಹ ದುರ್ಘಟನೆ ನಡೆದಿದೆ ಎಂದು ಅನೇಕರು ಆರೋಪಿಸಿದ್ದರು. ಇದಕ್ಕೆ ಉತ್ತರಿಸಿರುವ ಅಜಿತ್​ ದೋವಲ್​, “ನಮ್ಮಲ್ಲಿ ಸಾಕಷ್ಟು ಪೊಲೀಸ್​ ಸಿಬ್ಬಂದಿಗಳಿದ್ದಾರೆ. ದೆಹಲಿ ಪೊಲೀಸರ ಸಾಮರ್ಥ್ಯ ಮತ್ತು ಉದ್ದೇಶವನ್ನು ಜನರು ಅನುಮಾನಿಸುತ್ತಿದ್ದಾರೆ. ಜನರು ಸಮವಸ್ತ್ರದಲ್ಲಿರುವ ಪೊಲೀಸರನ್ನು ನಂಬುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ಗಲಭೆ ನಡೆದಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಜಿತ್​ ದೋವಲ್​, ಎಲ್ಲಾ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೆಹಲಿಯ ಬೀದಿಗಳಲ್ಲಿ ಯಾರೂ ಬಂದೂಕುಗಳನ್ನು ಹಿಡಿದು ತಿರುಗಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts