More

    ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ 4ನೇ ಬೆಕ್ಕನ್ನು ಪತ್ತೆಹಚ್ಚಿ!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿಭ್ರಮ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಬೆಂ-ಮೈ ಎಕ್ಸ್​ಪ್ರೆಸ್ ವೇನಲ್ಲಿ ಇಲ್ಲಿಯ ತನಕ 512 ಅಪಘಾತ; ಪರಿಹಾರ ಏನು? ಸದನದಲ್ಲಿ ಮರಿತಿಬ್ಬೇಗೌಡ ಪ್ರಶ್ನೆ

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Cat 2
    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮೈದಾನದ ಒಂದು ಪುಟ್ಟ ಭಾಗವನ್ನು ನೋಡಬಹುದು. ಅಲ್ಲಿ ನಾಲ್ಕು ಬೆಕ್ಕಳು ಕ್ಯಾಮೆರಾ ಕಡೆ ನೋಡುತ್ತಿರುವಂತೆ ನಮಗೆ ಭಾಸವಾಗುತ್ತದೆ. ಆದರೆ, ಅಲ್ಲಿ ಮೂರು ಬೆಕ್ಕುಗಳು ಮಾತ್ರ ನಮ್ಮ ಕಣ್ಣುಗಳಿಗೆ ಸುಲಭವಾಗಿ ಕಾಣುತ್ತದೆ. ಆದರೆ, ಫೋಟೋದಲ್ಲಿ ನಾಲ್ಕನೆಯ ಬೆಕ್ಕು ಸಹ ಇದೆ. ಆ ಬೆಕ್ಕು ಎಲ್ಲಿದೆ ಎಂಬುವನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ನಾಲ್ಕನೇ ಬೆಕ್ಕು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಬೆಕ್ಕನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಕಾರು ಅಪಘಾತದಲ್ಲಿ ಪವಾಡವೆಂಬಂತೆ ಟೀಮ್​ ಇಂಡಿಯಾದ ಮಾಜಿ ವೇಗಿ ಪ್ರವೀಣ್​ ಕುಮಾರ್ ಪಾರು! ಪುತ್ರನೂ ಬಚಾವ್​ ​

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ನಾಲ್ಕನೇ ಬೆಕ್ಕನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the cat 3

    ಕಣ್ಣಿಗೊಂದು ಸವಾಲ್​: ಈ ಫೋಟೋದಲ್ಲಿರುವ ಬೆಕ್ಕನ್ನು ಪತ್ತೆ ಹಚ್ಚಿ, ಈವರೆಗೂ ಯಾರೂ ಪತ್ತೆ ಹಚ್ಚಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts