ನವದೆಹಲಿ: ರಾಷ್ಟ್ರೀಯ ವನ್ಯಜೀವಿ ಅಭಯಾರಣ್ಯ ಅಥವಾ ರಾಷ್ಟ್ರೀಯ ಉದ್ಯಾನವನದೊಳಗೆ ಗಣಿಗಾರಿಕೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.
ವನ್ಯಜೀವಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂದು ಹೇಳಿರುವ ಸುಪ್ರೀಂ, ದೇಶದ ಪ್ರತಿಯೊಂದು ಸಂರಕ್ಷಿತ ಅರಣ್ಯದ 1 ಕಿಮೀ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯವೆಂದು ಘೋಷಿಸಬೇಕು ಹಾಗೂ ನಿರ್ಬಂಧಿತ ವಲಯದೊಳಗೆ ಯಾವುದೇ ಚಟುವಟಿಕೆ ನಡೆಸಬಾರದೆಂದು ಹೇಳಿದೆ.
ರಾಷ್ಟ್ರೀಯ ಉದ್ಯಾನವನಗಳ ವಲಯವನ್ನು ಸೂಕ್ಷ್ಮ ವಲಯವೆಂದು ಘೋಷಿಸಿ, ಶೀಘ್ರದಲ್ಲೇ ಪಟ್ಟಿ ತಯಾರಿಸಬೇಕೆಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ವನ್ಯಜೀವಿ ಸಂರಕ್ಷಣೆ ಕುರಿತು ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಈ ವಲಯದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಇರಲೇಬೇಕು ಎಂದು ಹೇಳಿದೆ. (ಏಜೆನ್ಸೀಸ್)
ಗಾಯಕ ಮೂಸೆವಾಲ ಹತ್ಯೆ ಬೆನ್ನಲ್ಲೇ ಎಚ್ಚೆತ್ತ ಪಂಜಾಬ್ ಸರ್ಕಾರ: ಮತ್ತೆ 400 ಮಂದಿಗೆ ಭದ್ರತೆ