21 C
Bengaluru
Thursday, January 23, 2020

ರಾಜಕೀಯ ಅಸ್ಥಿತೆಗೆ ಬ್ರೇಕ್ ಬಿದ್ದಿದೆ, ಇನ್ನಾದರೂ ಸರ್ಕಾರ ಚುರುಕಾಗಲಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು, ಫಲಿತಾಂಶ ಬಂದ ಬಳಿಕ ಕಳೆದ ಒಂದೂವರೆ ವರ್ಷಗಳಿಂದ ಕರ್ನಾಟಕ ರಾಜಕೀಯ ಅಸ್ಥಿರತೆಗೆ ನಲುಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು, ಸರ್ಕಾರ ರಚಿಸಿದವಾದರೂ, ಅದು ಅಲ್ಪಾಯುಷಿ ಸರ್ಕಾರವಾಗಿತ್ತು.

ಆ ಬಳಿಕ ಬಿಜೆಪಿ ಸರ್ಕಾರ ರಚನೆ ಮಾಡಿತಾದರೂ ಸ್ಪಷ್ಟ ಬಹುಮತ ಹೊಂದಿರಲಿಲ್ಲ. ಪರಿಣಾಮ, ರಾಜಕೀಯ ಲೆಕ್ಕಾಚಾರಗಳು, ಹಗ್ಗಜಗ್ಗಾಟಗಳು ಮುಂದುವರಿದೇ ಇದ್ದವು. ಕಾಂಗ್ರೆಸ್-ಜೆಡಿಎಸ್​ನಿಂದ ಬಂಡಾಯವೆದ್ದು ಬಂದ ಶಾಸಕರು, ಸ್ಪೀಕರ್ ಕ್ರಮದಿಂದ ಅನರ್ಹಗೊಂಡರು. ಪ್ರಕರಣ ಸುಪ್ರೀಂ ಕೋರ್ಟ್ ತಲುಪಿ, ಅನರ್ಹತೆ ಸಿಂಧುವಾದರೂ, ಮತ್ತೆ ಚುನಾವಣೆಗೆ ಸ್ಪರ್ಧಿಸಬಹುದೆಂಬ ಆದೇಶ ಹೊರಬಿತ್ತು.

ಹಾಗಾಗಿಯೇ, ರಾಜ್ಯದ ಚಿತ್ತ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮೇಲೆ ನೆಟ್ಟಿತ್ತು. ಡಿಸೆಂಬರ್ 9ರಂದು ಫಲಿತಾಂಶ ಹೊರಬಿದ್ದು, 15ರಲ್ಲಿ 12 ಸ್ಥಾನ ಬಿಜೆಪಿ ಗೆಲ್ಲುವುದರೊಂದಿಗೆ ರಾಜಕೀಯ ಅಸ್ಥಿರತೆಯ ದೀರ್ಘ ಅಧ್ಯಾಯಕ್ಕೆ ಕೊನೆ ಹಾಡಿದಂತಾಗಿದೆ.

ಇನ್ನು ಸಚಿವಸ್ಥಾನ ಹಂಚಿಕೆ ಸೇರಿ ಮುಂತಾದ ಕಸರತ್ತುಗಳು ನಡೆಯಲಿವೆ ಯಾದರೂ, ಸ್ಪಷ್ಟ ಬಹುಮತದ ಸರ್ಕಾರ ಪೂರ್ಣಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಂತಾಗಿದೆ. ಹಾಗಾಗಿ, ಇನ್ನು ಯಾವುದೇ ಸಬೂಬು, ನೆಪಗಳನ್ನು ಹೇಳದೆ ಜನರ ಆಶೋತ್ತರಗಳಿಗೆ ಸ್ಪಂದಿಸುವ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ, ಕ್ಷೇತ್ರಗಳತ್ತ ಗಮನ ವಹಿಸುವ ಕೆಲಸಗಳನ್ನು ಜರೂರಾಗಿ ಮಾಡಬೇಕಿದೆ.

ಉಪ ಚುನಾವಣೆ ಫಲಿತಾಂಶದ ಬಗ್ಗೆ ಹಲವು ವಿಧದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆಯಾದರೂ, ಜನರು ರಾಜಕೀಯ ಅಸ್ಥಿರತೆ, ಅದು ಸೃಷ್ಟಿಸಿದ ಗೋಜಲು, ಗೊಂದಲಗಳಿಂದ ಬೇಸತ್ತಿದ್ದರು ಎಂಬುದು ತೋರುತ್ತದೆ. ಈ ಸರ್ಕಾರದ ಬಳಿ ಮೂರೂವರೆ ವರ್ಷ ಅವಧಿ ಬಾಕಿ ಇದೆ. ಇದು ಕಡಿಮೆ ಸಮಯವೇನಲ್ಲ. ಸರಿಯಾಗಿ ಯೋಜನೆ ಹಾಕಿಕೊಂಡು, ಪ್ರಬಲ ಇಚ್ಛಾಶಕ್ತಿಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದರೆ ಬದಲಾವಣೆ ಅಶಕ್ಯವೇನಲ್ಲ.

ರಾಜ್ಯ ಈಗಾಗಲೇ ಹಲವು ವಿಧದ ಸಮಸ್ಯೆಗಳಿಂದ ಬಳಲುತ್ತಿದೆ. ಉತ್ತರ ಕರ್ನಾಟಕ ನೆರೆ ನಂತರದ ಸ್ಥಿತಿಯಿಂದ ಚೇತರಿಸಿಕೊಳ್ಳಬೇಕಿದೆ. ಕೆಲ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯೂ ಇದೆ. ರೈತರು ಚಿಂತಾಕ್ರಾಂತರಾಗಿದ್ದಾರೆ. ಅವರ ಮುಂದಿನ ಬದುಕಿಗೆ ಭರವಸೆ ತುಂಬುವ, ‘ನಾವು ನಿಮ್ಮ ಜತೆ ಇದ್ದೇವೆ’ ಎಂದು ವಿಶ್ವಾಸ ನೀಡುವ ಕೆಲಸ ಆಗಬೇಕಿದೆ. ಮತ್ತೊಂದೆಡೆ, ಆರ್ಥಿಕ ಹಿನ್ನಡೆಯ ಕರಿನೆರಳು ರಾಜ್ಯದ ಮೇಲೂ ವ್ಯಾಪಿಸಿದ್ದು, ಹಲವು ವಲಯಗಳ ಚೇತರಿಕೆಗೆ ಕ್ರಮ ಕೈಗೊಳ್ಳಬೇಕಿದೆ.

ಉಪ ಚುನಾವಣೆ ಮತ್ತು ಸೋಲು-ಗೆಲುವು ಈಗ ಮುಗಿದ ಅಧ್ಯಾಯ. ಜನರ ತೀರ್ಪನ್ನು ಎಲ್ಲ ಪಕ್ಷಗಳು ಗೌರವಿಸಿ, ಮುಂದಿನ ದಿನಗಳ ಕಡೆಗೆ ಗಮನ ಹರಿಸಬೇಕಿದೆ. ಅರ್ಹರೋ-ಅನರ್ಹರೋ ಎಂಬ ಪ್ರಶ್ನೆಗಿಂತ ಸ್ಥಿರ ಸರ್ಕಾರವೊಂದು ಈ ಎಲ್ಲ ಗೊಂದಲಗಳಿಗೆ ಪರಿಹಾರ ನೀಡಬಲ್ಲದು ಎಂಬ ಸಂದೇಶವನ್ನು ಮತದಾರ ಈ ಮೂಲಕ ನೀಡಿದ್ದಾನೆ.

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಆಂತರಿಕ ಭಿನ್ನಮತದಿಂದಲೇ ಬಸವಳಿದು ಹೋಗಿ, ಜನರ ತೀವ್ರ ಅಸಮಾಧಾನಕ್ಕೂ ಕಾರಣವಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಈಗಿನ ಸರ್ಕಾರ ಹಳೆಯ ತಪು್ಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಅಭಿವೃಧಿ್ಧ ಹಾದಿಯಲ್ಲಿ ಮುಂದೆ ಸಾಗಬೇಕು. ಉಪಚುನಾವಣೆಯಲ್ಲಿ ಗೆದ್ದ ಹೊಸ ಜನಪ್ರತಿನಿಧಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...