ಆಚರಣೆ ಹಿಂದಿದೆ ವೈಜ್ಞಾನಿಕ ಕಾರಣ: ಗೀತಾ ಮರಂಕಾಡಿ

Kdb_aati donji dina
Published on

ಕಡಬ: ತುಳುನಾಡಿನ ಆಚರಣೆಗಳ ಹಿಂದೆ ವೈಜ್ಞಾನಿಕ ಕಾರಣಗಳಿವೆ. ನಮ್ಮ ಹಿರಿಯರಿಂದ ಆಚರಣೆ ಅನುಕರಿಸುತ್ತಾ ಬರುತ್ತಿರುವ ನಾವುಗಳು ನಮ್ಮ ಮಕ್ಕಳಿಗೆ ಅದರ ಮಹತ್ವ ತಿಳಿಸಿ ಉತ್ತೇಜನ ಕೊಡುವ ಕೆಲಸ ಆಗಬೇಕು. ಆಚರಣೆಗಳು ವೈಭವೀಕರಣಗೊಳ್ಳದೆ ಮೂಲತತ್ವವನ್ನು ಮರೆಮಾಚಬಾರದು ಎಂದು ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘ ಮಹಿಳಾ ಸಮಿತಿ ಅಧ್ಯಕ್ಷೆ ಗೀತಾ ಮರಂಕಾಡಿ ಹೇಳಿದರು.

ಶ್ರೀ ರಾಮಕುಂಜೇಶ್ವರ ದೇವಸ್ಥಾನ ವಠಾರದಲ್ಲಿ ಆಟಿಡೊಂಜಿ ದಿನದ ಮಹತ್ವ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಪ್ರದೀಪ್ ಬಾಕಿಲ ಉಪನ್ಯಾಸ ನೀಡಿದರು. ಆಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ ಅಧ್ಯಕ್ಷತೆ ವಹಿಸಿದ್ದರು. ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ಅಧ್ಯಕ್ಷ ಡಿ.ವಿ.ಮನೋಹರ, ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘ ಗೌರವಾಧ್ಯಕ್ಷ ಗುಮ್ಮಣ್ಣ ಗೌಡ ಪಿ., ಮಹಿಳಾ ಘಟಕ ಅಧ್ಯಕ್ಷೆ ಸುಶೀಲಾ ವಳೆಂಜ, ಯುವ ಘಟಕದ ಅಧ್ಯಕ್ಷ ಬಾಲಕೃಷ್ಣ ಗೌಡ ಪಟ್ಟೆ ಸಂಪ್ಯಾಡಿ ಉಪಸ್ಥಿತರಿದ್ದರು.

ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಪ್ರೇರಕಿ ಲಲಿತಾ ವರದಿ ವಾಚಿಸಿದರು. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಪದ್ಮಪ್ಪ ಗೌಡ ಕೆ. ಪ್ರಸ್ತಾವಿಸಿ ಸ್ವಾಗತಿಸಿ. ಪತ್ರಕರ್ತ ಹರೀಶ್ ಬಾರಿಂಜ ವಂದಿಸಿ. ರಾಮಕುಂಜ ಯುವ ಒಕ್ಕಲಿಗ ಗೌಡ ಸೇವಾ ಸಂಘ ಸಾಂಸ್ಕೃತಿಕ ಕಾರ್ಯದರ್ಶಿ ಹರೀಶ್ ಬರಮೇಲು ನಿರೂಪಿಸಿದರು.

ಸಾಧಕರಿಗೆ ಸನ್ಮಾನ

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ರಾಮಕುಂಜ ಬರಮೇಲು ನಿವಾಸಿ ಸಿಂಚನಾ, ರಾಮಕುಂಜ ಗಾಂದಾರಿಮಜಲು ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಎಎಸ್‌ಐ ನಿವಾಸಿ ಗಿರಿಯಪ್ಪ ಗೌಡ, ನಾಟಿವೈದ್ಯೆ ಜಾನಕಿ ಪೂವಪ್ಪ ಗೌಡ ಅಲೆಕ್ಕ, ಕಾರ್ಯಕ್ರಮದ ವಿವಿಧ ಪ್ರಾಯೋಜಕರನ್ನು ಗೌರವಿಸಲಾಯಿತು. ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಡಬದ ಹೊಸಮಠದಲ್ಲಿ 15 ಕೋಟಿ ರೂ.ವೆಚ್ಚದಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣವಾಗಲಿದೆ. ಇದಕ್ಕೆ ಕಡಬ ತಾಲೂಕಿನ 42 ಗ್ರಾಮಗಳ ಸಮಾಜ ಬಾಂಧವರೂ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಮಹಾ ಅಭಿಯಾನ ನಡೆಸಲಾಗುತ್ತಿದೆ. ಸುರೇಶ್ ಬೈಲು, ಅಧ್ಯಕ್ಷ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ

ಸುರೇಶ್ ಬೈಲು, ಅಧ್ಯಕ್ಷ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net