More

    ಬೇಲೂರು ಕ್ಷೇತ್ರದಲ್ಲಿ ಅಹಿತಕರ ಘಟನೆಗಿಲ್ಲ ಅವಕಾಶ

    ಬೇಲೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮತಗಟ್ಟೆಗಳಿಗೆ ತೆರಳಲು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಗುರುವಾರ ಆಗಮಿಸಿದ್ದ ಸಿಬ್ಬಂದಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ.ಮಮತಾ ಅಗತ್ಯ ಸಲಹೆ ಹಾಗೂ ಸೂಚನೆ ನೀಡಿ ಮತಗಟ್ಟೆಗಳಿಗೆ ಕಳುಹಿಸಿಕೊಟ್ಟರು.

    ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತಯಂತ್ರ ಮತ್ತು ಪರಿಕರಗಳನ್ನು ಹಿಡಿದು ವಿವಿಧ ಮತಗಟ್ಟೆಗಳಿಗೆ ವಾಹನಗಳಲ್ಲಿ ತೆರಳಿದರು. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆ ಮತ್ತು ಅಶಾಂತಿ ಉಂಟಾಗದಂತೆ ತಾಲೂಕು ಆಡಳಿತ ಮತ್ತು ಪೋಲಿಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆಗೆ ಮುಂದಾಗಿದೆ.

    270 ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ.ಮಮತಾ ಮೂರು ಸುತ್ತಿನಲ್ಲಿ ಮಾಹಿತಿ ನೀಡಿದರು. ಮತಯಂತ್ರಗಳು ಕೆಟ್ಟರೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ಮುನ್ನೆಚ್ಚರಿಕೆ ವಹಿಸುವಂತೆ ತಿಳಿ ಹೇಳಿದರು.

    ಸಹಾಯಕ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ 270 ಮತಗಟ್ಟೆಗಳಿದ್ದು, ಇಲ್ಲಿ 2,01,235 ಲಕ್ಷ ಮತದಾರರಿದ್ದು, ಇದರಲ್ಲಿ 1,0725 ಪುರುಷ ಹಾಗೂ 1,05,10 ಲಕ್ಷ ಮಹಿಳಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 270 ಮತಗಟ್ಟೆಗಳಿದ್ದು, 81 ಸೂಕ್ಷ್ಮ ಹಾಗೂ 189 ಸಾಮಾನ್ಯ ಮತಗಟ್ಟೆಗಳಿವೆ. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ ಬಂದೂಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಮತಗಟ್ಟೆಗೂ ಸಿಬ್ಬಂದಿ ನಿಯೋಜಿಸಲಾಗಿದೆ. 326 ಪಿಆರ್‌ಒ, 326 ಎಪಿಆರ್‌ಒ, 326 ಪಿಒ-ಟು, 326 ಪಿಒ-ತ್ರಿ ಸಿಬ್ಬಂದಿ ಇದ್ದು, ಒಟ್ಟಾರೆಯಾಗಿ 1034 ಸಿಬ್ಬಂದಿ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇಲ್ಲಿ 9 ಮತಗಟ್ಟೆಗಳನ್ನು ಮಾದರಿ ಮತಗಟ್ಟೆಗಳ್ಳನ್ನಾಗಿ ಗುರುತಿಸಲಾಗಿದ್ದು, ಇದರಲ್ಲಿ 5 ಸಖಿ ಮತಗಟ್ಟೆಗಳಿವೆ ಎಂದು ಹೇಳಿದರು.

    1 ಪಿಡಬ್ಲುೃಡಿ, 1 ಯುವ, 1 ಎಥ್ನಿಕ್ ಹಾಗೂ ಥೀಮ್ ಮತಗಟ್ಟೆಗಳನ್ನು ಮಾದರಿಯಾಗಿ ನಿರ್ಮಿಸಿ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಚುನಾವಣಾ ಸಿಬ್ಬಂದಿ ಕರೆದೊಯ್ಯಲು 42 ಕೆಎಸ್‌ಆರ್‌ಟಿಸಿ ಬಸ್, 12 ಮ್ಯಾಕ್ಸಿಕ್ಯಾಬ್, 8 ಜೀಪ್ ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ನಡೆಯುವ ದಿನದಂದು 28 ಸೆಕ್ಟರ್ ಅಧಿಕಾರಿಗಳು ತಮ್ಮ ಸೆಕ್ಟರ್ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಭದ್ರತೆಗಾಗಿ ಪೊಲೀಸರನ್ನೂ ನಿಯೋಜಿಸಲಾಗಿದೆ ಎಂದರು.

    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts