More

    ಯೋಜನೆಗಳಿಗೆ ಅನುದಾನ ಕೊರತೆಯಿಲ್ಲ

    ಬ್ಯಾಕೋಡ್: ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನದ ಕೊರತೆಯಿಲ್ಲ. ಈ ಹಿನ್ನೆಲೆಯಲ್ಲಿ ಶರಾವತಿ ಹಿನ್ನೀರಿನ ಸಂತ್ರಸ್ತರ ಅಭಿವೃದ್ಧಿಗೆ ನಾವು ಬದ್ಧ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

    ಕರೂರು ಹೋಬಳಿಯಲ್ಲಿ ಶನಿವಾರ ವಿವಿಧ ಕಾಮಗಾರಿ, ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡ ನಿರ್ಮಾಣ ಅಲ್ಲ, ಬದಲಿಗೆ ಮಾನವ ಜೀವನ ಮಟ್ಟದ ಸುಧಾರಣೆ. ಈ ದಿಸೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟ ಸುಧಾರಣೆಗೆ ಆರ್ಥಿಕ ಬಲ ನೀಡಿವೆ ಎಂದರು.
    ನಾಡಿಗೆ ಬೆಳಕು ನೀಡಿದ ಶರಾವತಿ ಸಂತ್ರಸ್ತರಿಗೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡುತ್ತೇನೆ. ದ್ವೀಪದ ಗ್ರಾಮಗಳಿಗೆ ಶರಾವತಿ ನದಿಯಿಂದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಲು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ರೂಪಿಸಲಾಗುತ್ತಿದೆ. ಶಾಲಾ ಕಾಲೇಜುಗಳ ಸುಣ್ಣ-ಬಣ್ಣ ಮಾಡಲು ಮೊದಲ ಆದ್ಯತೆ ನೀಡುತ್ತೇನೆ. ತುಮರಿ ಸರ್ಕಾರಿ ಕಾಲೇಜು ಅಭಿವೃದ್ಧಿಗೆ 5 ಲಕ್ಷ, ಅಲ್ಲದೆ ಗ್ರಾಮಸ್ಥರು ಮತ್ತು ಪ್ರವಾಸಿಗರ ಅನುಕೂಲಕ್ಕೆ ಶೌಚಗೃಹ ಪೂರ್ಣ ಮಾಡಲು ಹೆಚ್ಚುವರಿಯಾಗಿ 3 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.
    ತುಮರಿ ಗ್ರಾಪಂ ಅಧ್ಯಕ್ಷೆ ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ, ಉಪ ತಹಸೀಲ್ದಾರ್ ಮಾಲಿನಿ, ಮುಖಂಡರಾದ ಹೊಳೆಯಪ್ಪ, ಚಂದ್ರಪ್ಪ ಕಲ್ಸೆ, ಅಶೋಕ ಬೇಳೂರು, ಓಂಕಾರ ಜೈನ್, ಜಿ.ಟಿ.ಸತ್ಯನಾರಾಯಣ, ಗಣೇಶ್ ಜಾಕಿ, ದೇವರಾಜ್, ವಿಜಯ ಅಡಗಳಲೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts