More

    ಶಾಸಕರ ಭವನದಲ್ಲಿ ವಾಹನ ಚಾಲನಾ ಪರೀಕ್ಷೆ ಬೇಡ; ಸ್ಪೀಕರ್‌ಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

    ಬೆಂಗಳೂರು: ವಾಹನ ಚಾಲಕರ ಹುದ್ದೆ ನೇಮಕಕ್ಕೆ ಸಂಬಂಧಿಸಿದಂತೆ ಶಾಸಕರ ಭವನದಲ್ಲಿ ನಡೆಸಲು ಉದ್ದೇಶಿಸಿರುವ ವಾಹನ ಚಾಲನಾ ಪರೀಕ್ಷೆಯನ್ನು ರದ್ದುಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಛಲವಾದಿ ಟಿ.ನಾರಾಯಣಸ್ವಾಮಿ ಸ್ಪೀಕರ್‌ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

    ವಿಧಾನಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ 3 ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಿದ ಅರ್ಹ ಅಭ್ಯರ್ಥಿಗಳಿಗೆ ಶಾಸಕರ ಭವನ-2ರಲ್ಲಿ ವಾಹನ ಚಾಲನಾ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಲಾಗಿದೆ.

    ಆದರೆ ಶಾಸಕರ ಭವನದಲ್ಲಿ ವಾಹನ ಚಾಲನಾ ಕೌಶಲ, ನೈಪುಣ್ಯತೆ ಅಳೆಯಲು ಬೇಕಾದ ಯಾವುದೇ ಸವಲತ್ತುಗಳಿಲ್ಲ. ಹಾಗಾಗಿ ಶಾಸಕರ ಭವನ-2 ರಲ್ಲಿ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಯಾವುದೇ ಚಾಲನಾ ಪರೀಕ್ಷೆಯ ಮಾದರಿ ವ್ಯವಸ್ಥೆ ಶಾಸಕರ ಭವನ-2 ರಲ್ಲಿ ಇಲ್ಲದೇ ಇರುವುದರಿಂದ ಅಲ್ಲಿ ಪರೀಕ್ಷೆ ನಡೆಸಿದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಹಾಗೂ ಅಕ್ರಮಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಸ್ಪೀಕರ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

    ಈ ಪರೀಕ್ಷೆಯನ್ನು ಪ್ರಾದೇಶಿಕ ಸಾರಿಗೆ ಕೇಂದ್ರದಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿಕೊಡುವಂತಯೂ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts