More

    ಕಾಂಗ್ರೆಸ್ ಅಧಿಕಾರ ನಡೆಸುವ ಗ್ಯಾರಂಟಿಯಿಲ್ಲ

    ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಜನಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದಕ್ಕೆ ಸ್ವಪಕ್ಷೀಯರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವುದು ನಿದರ್ಶನ. ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅಧಿಕಾರ ನಡೆಸುವುದು ಖಚಿತವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.

    ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಚಿತ ಸೌಲಭ್ಯ ಕೊಡುತ್ತೇವೆ ಎಂದು ಮುಂದಾಲೋಚನೆ ಇಲ್ಲದೆ ಕಾಂಗ್ರೆಸ್ ಘೋಷಿಸಿತು. ಅಧಿಕಾರಕ್ಕೆ ಬಂದ ನಂತರ ಅವೈಜ್ಞಾನಿಕವಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸರ್ಕಾರ ಒಳ್ಳೆಯ ಆಡಳಿತ ನೀಡುವ ಯಾವ ಗ್ಯಾರಂಟಿಯೂ ಇಲ್ಲ. ಸರ್ಕಾರ ವ್ಯಾಪಾರಕ್ಕೆ ನಿಂತಿದೆ. ಖಾಲಿ ಹುದ್ದೆಗಳನ್ನು ವರ್ಗಾವಣೆ ಮೂಲಕ ಭರ್ತಿ ಮಾಡಲು ಹರಾಜು ಹಾಕುತ್ತಿದೆ ಎಂದು ದೂರಿದರು.
    ಸರ್ಕಾರ ರಚನೆಯಾಗಿ ಎರಡು ತಿಂಗಳಿಗೇ ಹಿರಿಯ ಶಾಸಕರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಹುಮತ ಇದ್ದರೂ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿಲ್ಲ. ಸಚಿವರು ಹಾಗೂ ಶಾಸಕರ ನಡುವೆ ಒಗ್ಗಟ್ಟಿಲ್ಲ. ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದರು.
    ಉಡುಪಿ ಕಾಲೇಜಿನ ಮಹಿಳಾ ಶೌಚಗೃಹದಲ್ಲಿ ಕ್ಯಾಮರಾ ಇಟ್ಟಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಡವಾಗಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬೆನ್ನಟ್ಟುವ ಬದಲಿಗೆ ಅಪರಾಧದ ಬಗ್ಗೆ ಟ್ವೀಟ್ ಮಾಡಿದವರನ್ನು ಬೆನ್ನುಹತ್ತಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ನಿದರ್ಶನ. ಪ್ರಕರಣದ ಕುರಿತು ಸಮಗ್ರ ತನಿಖೆಯಾಗಲಿ. ಪ್ರಕರಣ ದಾಖಲು ಮಾಡಲು ಪೊಲೀಸರು ವಿಳಂಬ ನೀತಿ ಅನುಸರಿಸಿದ್ದಾರೆ. ಸಮಗ್ರವಾಗಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದರು.
    ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನು ಸರ್ಕಾರ ಅಮಾಯಕರು ಎಂದು ಹೇಳುತ್ತಿರುವುದು ಖಂಡನೀಯ. ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಆರೋಪಿಗಳನ್ನು ರಕ್ಷಣೆ ಮಾಡುವುದು ಸರಿಯಲ್ಲ. ಒಳ್ಳೆಯವರು ಯಾರು? ಕೆಟ್ಟವರು ಯಾರು? ಎಂಬುದು ತಿಳಿದುಕೊಳ್ಳದಿದ್ದರೆ ರಾಜ್ಯದ ಪರಿಸ್ಥಿತಿ ಏನಾಗಬಹುದು? ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts