ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಬೇಡ

ಕಡೂರು: ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂಬ ದೂರದೃಷ್ಠಿ , ಗುರಿ ಇದ್ದರೆ ಎಲ್ಲವೂ ಸಾಧ್ಯ ಎಂಬವುದಕ್ಕೆ ಗ್ರಾಮ ಸೌಧ ನಿರ್ಮಾಣ ಮಾಡಿರುವುದು ಉತ್ತಮ ಉದಾಹರಣೆಯಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಪಿಳ್ಳೇನಹಳ್ಳಿಯಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿರ್ಮಾಣಗೊಂಡ ರಾಜೀವ್‌ಗಾಂಧಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ, ಅಧಿಕಾರವಿದ್ದಾಗ ಗ್ರಾಮಕ್ಕೆ ಒಳ್ಳೆಯದು ಮಾಡಬೇಕು ಎಂಬ ಗುರಿಮುಖ್ಯ ಎಂದರು.
ರಾಜೀವ ಗಾಂಧಿ ಪ್ರಧಾನ ಮಂತ್ರಿಯಾದಾಗ ಅಧಿಕಾರ ವಿಕೇಂದ್ರಿಕರಣವಾಗಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಮಾನ್ಯತೆ ದೊರೆಯಿತು. ಅಂದಿನಿಂದ ಸ್ಥಳೀಯ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸಲು ನರೇಗಾ ಯೋಜನೆಯಡಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಿಸುವುದು ದೊಡ್ಡದಲ್ಲ, ಅದನ್ನು ಪರಿಪಕ್ವವಾಗಿ ನಿರ್ವಹಣೆ ಮಾಡುವುದು ಮುಖ್ಯ. ಕೇಂದ್ರಕ್ಕೆ ಬರುವ ಸಾರ್ವಜನಿಕರನ್ನು ಅಲೆದಾಡಿಸದೆ ಸರಿಯಾದ ಸಮಯದಲ್ಲಿ ಕೆಲಸ ಮಾಡಿಕೊಡಬೇಕು. ಅಭಿವೃದ್ಧಿಯಲ್ಲಿ ರಾಜಕಾರಣ ಬೇಡ. ನಮ್ಮ ಜಿಲ್ಲೆಗೆ ಬಂದ 25 ಕೋಟಿ ರೂ. ಅನುದಾನದಲ್ಲಿ ಒಂದು ಕೋಟಿ ಅನುದಾನವನ್ನು ಪಿಳ್ಳೇನಹಳ್ಳಿ ಗ್ರಾಮ ಪಂಚಾಯಿತಿಗೆ ನೀಡಲಾಗಿದೆ ಎಂದರು.
ಆಡಳಿತದಲ್ಲಿ ಚುರುಕು ಮುಟ್ಟಿಸಲು ಜುಲೈನಿಂದ ಗ್ರಾಪಂ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು. ಪಿಳ್ಳೇನಹಳ್ಳಿ ಗ್ರಾಪಂ ಕಟ್ಟಡ ಮಾದರಿಯಾಗಿ ನಿರ್ಮಾಣವಾಗಿದೆ. ಇದಕ್ಕೆ ಕೈ ಜೋಡಿಸಿದ ಗ್ರಾಪಂನ ಆಡಳಿತ ಮಂಡಳಿ ಕಾರ್ಯನಿರ್ವಹಣೆ ಶ್ಲಾಘನೀಯ ಎಂದರು.
ತಾಪಂ ಇಒ ಸಿ.ಆರ್.ಪ್ರವೀಣ್ ಮಾತನಾಡಿ, ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನರೇಗಾ ಯೋಜನೆಯಡಿ ಕಟ್ಟಡ ನಿರ್ಮಿಸಲಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ನ್ಯಾಯ ಒದಗಿಸುವ ಈ ಸೌಧ ಜನಪ್ರತಿನಿಧಿಗಳ ಇಚ್ಛಾ ಶಕ್ತಿಯಿಂದ ನಿರ್ಮಾಣವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ಪಿ.ಎನ್.ರಮೇಶ್ ಮಾತನಾಡಿ, ಪಿಳ್ಳೇನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು, ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಲಾಗಿದೆ. ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷೆ ಶಾರದಮ್ಮ, ವಿಎಸ್‌ಎಸ್‌ಎನ್ ಅಧ್ಯಕ್ಷ ಮಹೇಂದ್ರ, ಹಾಲು ಒಕ್ಕೂಟದ ಅಧ್ಯಕ್ಷ ಶಶಿಧರ್ ಇದ್ದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…