ಪ್ರತಿಭಟನೆ ಕೈ ಬಿಟ್ಟು, ಅಭಿವೃದ್ಧಿಗೆ ಕೈ ಜೋಡಿಸಿ

ಕಳಸ: ಕೇವಲ ಜಿಪಂ, ತಾಪಂ ಚುನಾವಣೆಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದಿಂದ ವಿರೋಧ ಪಕ್ಷದವರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗಾಗಿ ಹೋರಾಟ ನಡೆಸುವುದಾರರೇ ನಾವು ಅವರ ಜತೆ ಕೈಜೋಡಿಸುತ್ತವೆ. ಪ್ರತಿಭಟನೆ ಕೈ ಬಿಟ್ಟು ಒಟ್ಟಾಗಿ ಹೋರಾಟ ನಡೆಸಲು ನಾವುಸಿದ್ದ ಎಂದು ಕಾಂಗ್ರೆಸ್ ಮುಖಂಡ ರಾಜೇಂದ್ರ ಹಿತ್ಲುಮಕ್ಕಿ ತಿಳಿಸಿದರು.
ಲೋಕಸಭಾ ಚುನಾವಣೆ ಗೆಲುವನ್ನು ಮುಂದಿನ ತಾಪಂ,ಜಿಪಂ ಚುನಾವಣೆಯಲ್ಲಿಯೂ ಪಡೆಯಲು ವಿರೋಧ ಪಕ್ಷದವರು ಈಗ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಹಿಂದಿನ ಸರ್ಕಾರ ತಾಲೂಕಿನ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ನಮ್ಮ ಸರ್ಕಾರ ಬಂದು 13 ತಿಂಗಳಾಗಿದೆ. ಸರ್ಕಾರ ರಚನೆಗೆ 3ತಿಂಗಳು, ಚುನಾವಣೆಗೆ 3 ತಿಂಗಳು ಹೋಗಿದೆ, ಉಳಿದ 6 ತಿಂಗಳು ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಈಗ ನಾವು ಕಚೇರಿಗಳನ್ನು ತಾಲೂಕಿಗೆ ತರುವ ವಿಚಾರದಲ್ಲಿ ಕಾರ್ಯೋನ್ಮುಖರಾಗಿದ್ದು, ಮುಂದಿನ ವಾರ ತಾಪಂ ಕಚೇರಿ ಪ್ರಾರಂಭವಾಗಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳಸ ತಾಲೂಕಿಗೆ ಪೂರ್ಣ ಪ್ರಮಾಣದ ಸ್ಥಾನಮಾನ ಕೊಡಲು ಸರ್ಕಾರ ಬದ್ದವಾಗಿದೆ. ಚುನಾವಣೆ ನಂತರದ 6 ತಿಂಗಳಲ್ಲಿ ಕಳಸದಲ್ಲಿ ಶೇ.50ಕ್ಕೂ ಹೆಚ್ಚು ಕಚೇರಿಗಳನ್ನು ಆರಂಭಿಸುವ ಬಗ್ಗೆ ಶಾಸಕರು, ಮಂತ್ರಿಗಳು ಭರವಸೆ ಕೊಟ್ಟಿದ್ದರು. ಶೀಘ್ರದಲ್ಲಿ ಕೃಷಿ ಸಹಾಯಕ ನಿರ್ದೇಶಕರು ಬರುತ್ತಾರೆ,. ಅಗ್ನಿಶಾಮಕ ಠಾಣೆಗೆ ಸ್ಥಳ ಮಂಜೂರಾತಿ ಕೇಳಲಾಗಿದೆ. ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆ ಮಾಡುವ ಪ್ರಯತ್ನ ನಡೆಯುತ್ತಿದೆ. ಸದ್ಯದಲ್ಲಿಯೇ ಡಯಾಲಿಸಿಸ್ ಕೇಂದ್ರ ಪ್ರಾರಂಭವಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷದವರು ಹೇಳಿದಂತೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದರೆ ಬೇರೆ ಪಕ್ಷಗಳು ನಿಷ್ಕ್ರೀಯವಾಗಿವೆ. ಕಾಂಗ್ರೆಸ್ ಕಾರ್ಯಕರ್ತರು ಸಕ್ರೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದರ್ಥ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿ ಕಳ್ಳ ಸಾಗುವಳಿ ಚೀಟಿ ಮಾಡಿಕೊಟ್ಟಿದ್ದಾರೆ. ಈಗ 20 ಜನ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿದೆ. ಆದ್ದರಿಂದ ಇಲ್ಲಿಗೆ ಯಾವ ಅಧಿಕಾರಿಗಳು ಬಂದರೂ ಹೆಚ್ಚಿನ ದಿನ ಇರುತ್ತಿಲ್ಲ. ಇದು ಭ್ರಷ್ಟ ಆಡಳಿತದ ವೈಲ್ಯವೇ ಹೊರತು ನಮ್ಮ ಸರ್ಕಾರದ ವೈಲ್ಯವಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರ ಅಣತಿಯಂತೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂಬ ಆರೋಪಕ್ಕೆ ಉತ್ತರಿಸಿ, ಕಾಂಗ್ರೆಸ್ ಪರ ಕೆಲಸ ಮಾಡಿದ ಒಬ್ಬ ನಟನ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ, ಅಧಿಕಾರಿಗಳು ನ್ಯಾಯದ ಪರ ಕೆಲಸ ಮಾಡುತ್ತಿದ್ದಾರೆ. ಬೇರೆ ಪಕ್ಷದವರು ತಪ್ಪು ಕೆಲಸ ಮಾಡಿ ಸ್ಟೇಷನ್‌ಗೆ ಹೋಗಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.

Share This Article

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…