More

    ‘ಕೊರೊನಾ ವೈರಸ್​ ಬಗ್ಗೆ ಯಾರಿಗೂ ಆತಂಕ ಬೇಡ..’ದೇಶದ ಜನರಿಗೆ ಧೈರ್ಯ ತುಂಬಿದ ಪ್ರಧಾನಿ ನರೇಂದ್ರ ಮೋದಿ

    ನವದೆಹಲಿ: ಚೀನಾದಲ್ಲಿ ಶುರುವಾದ ಕೊರೊನಾ ವೈರಸ್​ ವಿಶ್ವದಾದ್ಯಂತ ಹರಡಿದ್ದು ಭಾರತಕ್ಕೂ ಕಾಲಿಟ್ಟಿದೆ. ಈಗ ದೆಹಲಿ ಮತ್ತು ತೆಲಂಗಾಣದಲ್ಲಿ ಹೊಸದಾಗಿ ಎರಡು ಪ್ರಕರಣಗಳು ಪತ್ತೆಯಾಗಿವೆ.

    ಈ ಮಧ್ಯೆ ನರೇಂದ್ರ ಮೋದಿಯವರು ಮಂಗಳವಾರ ಟ್ವೀಟ್ ಮಾಡುವ ಮೂಲಕ ದೇಶದ ಜನರಿಗೆ ಧೈರ್ಯ ತುಂಬಿದ್ದಾರೆ. ಕೊರೊನಾ ವೈರಸ್​ ಬಗ್ಗೆ ಯಾರೂ ಭಯಪಡಬೇಕಿಲ್ಲ. ಭ್ರಮನಿರಸನ ಆಗುವ ಅವಶ್ಯಕತೆ ಇಲ್ಲ. ಅದರ ನಿಯಂತ್ರಣಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.

    ಹಾಗೇ, ಕೊರೊನಾ ತಡೆಯಲು ನಮ್ಮನ್ನು ನಾವು ಮೊದಲು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ನಮ್ಮ ಕೈಗಳನ್ನು ಆಗಾಗ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಸಾರ್ವಜನಿಕ, ಜನನಿಬಿಡ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂಬ ಸಲಹೆಗಳುಳ್ಳ ಒಂದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

    ಕೊರೊನಾ ವೈರಸ್​ ನಿಯಂತ್ರಣ, ಚಿಕಿತ್ಸೆಗೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ನಡೆಸಲಾಗಿದೆ. ರಾಜ್ಯಗಳು, ಹಲವು ಸಚಿವರು ಸೇರಿ ಕೊರೊನಾ ತಡೆಗೆ ಕೆಲಸ ಮಾಡುತ್ತಿದ್ದಾರೆ. ವಿದೇಶಗಳಿಂದ ಬರುವ ಜನರನ್ನು ಸ್ಕ್ರೀನಿಂಗ್​ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

    ಇನ್ನು ಆಗ್ರಾದಲ್ಲಿ ಆರು ಮಂದಿಯಲ್ಲಿ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಅವರನ್ನೆಲ್ಲ ಸಫ್ದರ್​ಜಂಗ್​ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ನಲ್ಲಿ ಇಟ್ಟು ಗಮನ ವಹಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
    ಈ ಆರು ಮಂದಿ ಕೊರೊನಾ ವೈರಸ್ ತಗುಲಿರುವ ದೆಹಲಿ ವ್ಯಕ್ತಿಯ ಜತೆಗೆ ಇದ್ದವರು. ಅವರ ರಕ್ತದ ಮಾದರಿಯನ್ನು ಪುಣೆಯ ಎನ್​ಐವಿ ಲ್ಯಾಬೊರೇಟರಿಗೆ ಕಳಿಸಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts