More

    ಶಾಮನೂರು ಮೆಚ್ಚುಗೆಯಲ್ಲಿ ರಾಜಕೀಯವಿಲ್ಲ

    ಶಿವಮೊಗ್ಗ: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬಗ್ಗೆ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮೆಚ್ಚುಗೆ ವ್ಯಕ್ತಪಡಿಸಿರುವುದರಲ್ಲಿ ಯಾವುದೇ ರಾಜಕೀಯ ತಂತ್ರಗಾರಿಕೆಯಿಲ್ಲ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ ಅಭಿಪ್ರಾಯಪಟ್ಟಿದ್ದಾರೆ.

    ರಾಘವೇಂದ್ರ ಅವರ ಉತ್ತಮ ಕಾರ್ಯಗಳನ್ನು ಗಮನಿಸಿ ಶಾಮನೂರು ಮೆಚ್ಚುಗೆ ಮಾತನ್ನಾಡಿದ್ದಾರೆ. ಅವರು ಈ ರೀತಿ ಹೇಳಿರುವುದರಿಂದ ದಲಿತ ಮತ ಬ್ಯಾಂಕ್ ಸಂಪೂರ್ಣವಾಗಿ ಕಾಂಗ್ರೆಸ್ ಕಡೆಗೆ ವಾಲುತ್ತದೆ ಎಂಬುದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರ ವ್ಯಾಖ್ಯಾನವಷ್ಟೇ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಶಾಮನೂರು ಅವರ ಅಭಿಪ್ರಾಯ ಜಿಲ್ಲೆಯ ಸಾರ್ವಜನಿಕ ವಲಯದ ಅನಿಸಿಕೆಯೂ ಹೌದು. ಈ ಹಿಂದೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಕೂಡ ಅನೇಕ ಬಾರಿ ಯಡಿಯೂರಪ್ಪ ಮತ್ತು ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದರು.
    ಚುನಾವಣಾ ತಂತ್ರಗಾರಿಕೆಯನ್ನು ಯಾರೂ ಬಹಿರಂಗಪಡಿಸುವುದಿಲ್ಲ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಜನರು ತೀರ್ಮಾನಿಸಿದ್ದಾರೆ. ಭಾರತ ದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮುತ್ತಿದೆ. ಮೋದಿ ವಿಶ್ವನಾಯಕ ಎಂಬುದನ್ನು ಬಹುತೇಕ ರಾಷ್ಟ್ರಗಳು ಒಪ್ಪಿವೆ ಎಂದು ಹೇಳಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ಕಾರ್ಯದರ್ಶಿ ಜಗದೀಶ್, ಪ್ರಮುಖರಾದ ಎಸ್.ಜ್ಞಾನೇಶ್ವರ್, ಸಿ.ಎಚ್.ಮಾಲತೇಶ್, ಧರ್ಮಪ್ರಸಾದ್, ವೀರಭದ್ರಪ್ಪ ಪೂಜಾರ್, ಸುಧಾಕರ್, ಕುಪೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts