More

    ಕೋವಿಡ್ ಎದುರಿಸಲು ಸಿಬ್ಬಂದಿಗಳ ಕೊರತೆಯಿಲ್ಲ

    ಬೆಂಗಳೂರು: ಮಹಾನಗರ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳನ್ನು ಎದುರಿಸಲು ಆರೋಗ್ಯ ವಿಭಾಗದಲ್ಲಿ ಯಾವುದೇ ಸಿಬ್ಬಂದಿಗಳ ಕೊರತೆ ಇಲ್ಲ. ಅಗತ್ಯ ಸಿಬ್ಬಂದಿಗಳನ್ನು ವಿವಿಧ ವಿಭಾಗಗಳ ಮೂಲಕ ಕ್ರೊಡೀಕರಿಸಿಕೊಂಡು ರೋಗಿಗಳ ಆರೈಕೆಗೆ ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯಸ್ಥರು ತಿಳಿಸಿದ್ದಾರೆ.

    ಸದ್ಯ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿಲ್ಲ. ಕೇರಳದಲ್ಲಿ ಹೊಸ ರೂಪಾಂತರಿ ತಳಿಯಿಂದ ಉದ್ಭವಿಸಿರುವ ಆತಂಕ ನಮ್ಮಲ್ಲಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವಂತೆ ಎಲ್ಲ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಜತೆಗೆ ಸಾರ್ವಜನಿಕರು ಕೂಡ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.

    ಇದೇ ವೇಳೆ ಈ ವರ್ಷಾಂತ್ಯದಲ್ಲಿ ಕೋವಿಡ್ ಸೋಂಕು ಉಲ್ಬಣವಾದಲ್ಲಿ ಅದನ್ನು ಪರಿಣಾಮಕಾರಿಯಾಗೀ ನಿಯಂತ್ರಿಸಲು ಪಾಲಿಕೆಯ ಎಲ್ಲ ವಿಭಾಗಗಳ ಹಿರಿಯ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತದೆ. ಇದರಿಂದಾಗಿ ಹಾಲಿ ಡಿಸೆಂಬರ್ ತಿಂಗಳಲ್ಲಿ ಯಾರೂ ಕೂಡ ಕೇಂದ್ರ ಸ್ಥಾನ ಬಿಟ್ಟು ಹೊರಗೆ ಹೋಗದಂತೆ ಹಾಗೂ ರಜೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

    ಮೇಕ್ ಶಿಫ್ಟ್​ ಆಸ್ಪತ್ರೆ ಸಜ್ಜು:

    ನಗರದ ರಾಜೀವ್‌ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ (ಆರ್‌ಜಿಐಸಿಡಿ) ರೂಪಾಂತರಿ ತಳಿಗೆ ಒಳಗಾದ ರೋಗಿಗಳಿಗೆ ಚಿಕಿತ್ಸೆ ಒದಗಿಸಲು 200 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಯನ್ನು (ಮೇಕ್ ಶಿಫ್ಟ್​) ಸಜ್ಜುಗೊಳಿಸಲಾಗಿದೆ. ಇಲ್ಲಿ ವೈದ್ಯರು, ಅರೆವೈದ್ಯರು ಹಾಗೂ ಇತರ ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ಔಷಧ ನೀಡಲು ವಿಶೇಷ ಕ್ರಮ ಕೈಗೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts