ಮುಳಬಾಗಿಲು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಉತ್ತಮ ಆಳ್ವಿಕೆ ನಡೆಸುತ್ತಿದ್ದಾರೆ. ಸಚಿವ ಸಂಪುಟದ ಎಲ್ಲ ಕಾಂಗ್ರೆಸ್ ಸದಸ್ಯರು ಮತ್ತು ಶಾಸಕರು ಇದ್ದಾರೆ. ಯಾವುದೇ ಕಾರಣಕ್ಕೂ ಅವರ ಬದಲಾವಣೆ ಇಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ನೀಡುತ್ತಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಇನ್ನು ಇತ್ತೀಚೆಗೆ ಕೋಲಾರ ಕಾಂಗ್ರೆಸ್ ಮುಖಂಡರ ನಡುವೆ ನಡೆದ ಮಾರಾಮಾರಿ ಕುರಿತು ಪ್ರತಿಕ್ರಿಯಿಸಿ, ಘಟನೆ ನಡೆಯಬಾರದಿತ್ತು ಆದರೆ, ನಡೆದು ಹೋಗಿದೆ. ಮತ್ತೊಮ್ಮೆ ಅಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಂದರು. ಪಕ್ಷದಲ್ಲಿ ಜಿಲ್ಲಾಧ್ಯಕ್ಷರ ಸ್ಥಾನ ತಾಯಿ ಇದ್ದಂತೆ ಎಲ್ಲರೂ ಗೌರವ ಕೊಡಬೇಕು. ಈ ಬಗ್ಗೆ ಸಿಎಂ ಸೇರಿ ಕೆಪಿಸಿಸಿ ಅಧ್ಯಕ್ಷರು, ವರಿಷ್ಠರು ಸಂಬಂಧಿಸಿದವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಗಾಂಧಿ ಕಟ್ಟಿದ ಪಕ್ಷದಲ್ಲಿ ಗೂಂಡಾಗಿರಿಗೆ ಅವಕಾಶ ಯಾವತ್ತೂ ಇರುವುದಿಲ್ಲ ಎಂದರು. ರಾಜ್ಯ ಕಿಸಾನ್ ಖೇತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಸುಭಾಷ್ ಚಂದ್ರ ಗೌಡ, ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಮಂಡಿಕಲ್ ಎಂ.ಎಸ್. ಮಂಜುನಾಥ್, ಕಾಂಗ್ರೆಸ್ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಜಯದೇವ್, ಕಾಂಗ್ರೆಸ್ ಎಸ್ಸಿ ಘಟಕದ ಅವಣಿ ಬ್ಲಾಕ್ ಅಧ್ಯಕ್ಷ ವಿ.ಮಾರಪ್ಪ, ನಗರಸಭೆ ಸದಸ್ಯ ಜಬೀವುಲ್ಲಾ, ಮುಖಂಡ ಹೈದಾಲಪುರ ಅಶೋಕ್ ಇದ್ದರು.
ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ!
You Might Also Like
2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life
Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…
ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು
ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…
ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips
Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…