More

    ಸಮಸ್ಯೆ ಸಿಎಂ ಗಮನಕ್ಕೆ ತರುವುದರಲ್ಲಿ ತಪ್ಪಿಲ್ಲ; ಎಂ.ಬಿ ಪಾಟೀಲ ಸಮರ್ಥನೆ

    ಬೆಂಗಳೂರು: ವೈಜ್ಞಾನಿಕ ಜಾತಿಗಣತಿಗಾಗಿ ಆಗ್ರಹಿಸಿ ’ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ವತಿಯಿಂದ ನೀಡಲಾಗಿರುವ ಮನವಿಗೆ ಸಹಿ ಮಾಡಿರುವವರ ಪೈಕಿ ಒಬ್ಬರಾದ ಸಚಿವ ಎಂ ಬಿ ಪಾಟೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
    ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು.
    ಇರುವ ಸಮಸ್ಯೆಗಳನ್ನು ಗಮನಕ್ಕೆ ತರುವುದರಲ್ಲಿ ಯಾವುದೇ ತಪ್ಪು ಇಲ್ಲ. ಉದಾಹರಣೆಗೆ, ಲಿಂಗಾಯತರಲ್ಲಿ ಗಾಣಿಗ, ಸಾದರ ಹೀಗೆ 50ಕ್ಕೂ ಹೆಚ್ಚು ಉಪಜಾತಿಗಳು ಇದ್ದು ಅವರಿಗೆ ಲಿಂಗಾಯತ-ಗಾಣಿಗ, ಲಿಂಗಾಯತ- ಸಾದರ ಎಂದು ನಮೂದಿಸಿದ್ದರೆ 2ಎ ಪ್ರವರ್ಗದಡಿ ಮೀಸಲಾತಿ ಸಿಗುವುದಿಲ್ಲ. ಈ ಕಾರಣಕ್ಕೆ ಅವರೆಲ್ಲ ಹಿಂದೂ-ಗಾಣಿಗ ಹಿಂದೂ-ಸಾದರ ಎಂದು ನಮೂದಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸಲು ನಾವು ಮುಖ್ಯಮಂತ್ರಿ ಅವರನ್ನು ಕೋರಿದ್ದೇವೆ. ಈ ತೊಂದರೆಗಳ ಬಗ್ಗೆ ಅವರಿಗೂ ಗೊತ್ತಿದೆ ಎಂದು ವಿವರಿಸಿದರು.
    ಇಂತಹ ತೊಡಕುಗಳು ಒಕ್ಕಲಿಗ ಜನಾಂಗ ಸೇರಿದಂತೆ ಬೇರೆ ಸಮುದಾಯಗಳಿಗೂ ಇರಬಹುದು. ಇದ್ದರೆ, ಅವನ್ನು ಕೂಡ ಸರಿಪಡಿಸುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.
    ಮಹಾಸಭೆ ಮನವಿ ಏನಿತ್ತು?
    ಮಹಾಸಭಾದ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಈ ಸಮೀಕ್ಷೆಯ ಬಗ್ಗೆ ಪ್ರಸ್ತಾಪಿಸಿದಾಗ ಅನೇಕರು ಮನೆಗೆ ಸರ್ಕಾರಿ ಅಧಿಕಾರಿಗಳು ಬಂದಿಲ್ಲ, ತಮ್ಮ ಕುಟುಂಬದ ಯಾವುದೇ ಮಾಹಿತಿ ಪಡೆದಿಲ್ಲ ಎಂದಿದ್ದರು. ಅಷ್ಟೇ ಅಲ್ಲದೆ ಈಗಿನ ವರದಿಯನ್ನು ಯಥಾವತ್ತಾಗಿ ಅಂಗೀಕರಿಸುವುದು ಸೂಕ್ತವಲ್ಲ ಎಂದು ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts