More

    ಸನಾತನ ಹೇಳಿಕೆ; ಸುಪ್ರೀಂ ಕೋರ್ಟ್​ನಿಂದ ಯಾವುದೇ ನನಗೆ ನೋಟಿಸ್ ಬಂದಿಲ್ಲ: ಉದಯನಿಧಿ ಸ್ಟಾಲಿನ್

    ಚೆನ್ನೈ: ಸನಾತನ ಧರ್ಮದ ಕುರಿತಂತೆ ನಾನು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್​ನಿಂದ ನನಗೆ ಯಾವುದೇ ನೋಟಿಸ್​ ಬಂದಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್​ ಹೇಳಿದ್ದಾರೆ.

    ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರ ವಿರುದ್ಧ FIR ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ ಉದಯನಿಧಿಗೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿ ಮಾಡಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಉದಯನಿಧಿ ಸ್ಟಾಲಿನ್​ ಸುಪ್ರೀಂ ಕೋರ್ಟ್​ ಆದೇಶದ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸನಾತನ ಧರ್ಮದ ಕುರಿತು ಹೇಳಿಕೆಗೆ ಸಂಬಂಧಿಸಿದಂತೆ ನನಗೆ ಯಾವುದೇ ನೋಟಿಸ್​ ಬಂದಿಲ್ಲ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ವಾರಾಣಸಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

    ಸನಾತನ ಧರ್ಮ ನಿರ್ಮೂಲನೆ ಮಾಡಬೇಕೆಂದು ಹೇಳಿಕೆ ಕೊಟ್ಟಿರುವ ಸಚಿವ ಉದಯನಿಧಿ ವಿರುದ್ಧ FIR ದಾಖಲಿಸಬೇಕೆಂದು ಕೋರಿ ವಕೀಲ ಜಗನ್ನಾಥ್​ ಎಂಬುವವರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾ ಅನಿರುದ್ಧ ಬೋಸ್​ ಹಾಗೂ ಬೇಲಾ ಎಂ ತ್ರಿವೇದಿ ಅವರಿದ್ದ ದ್ವಿಸದಸ್ಯ ಪೀಠವು ಉದಯನಿಧಿ ಸ್ಟಾಲಿನ್​ ಹಾಗೂ ತಮಿಳುನಾಡು ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿತ್ತು.

    ಸನಾತನ ಧರ್ಮ ನಿರ್ಮೂಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಉದಯನಿಧಿ ಸ್ಟಾಲಿನ್​ ನಡೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ವಕೀಲ ಜಗನ್ನಾಥ್​​ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಆಗ್ರಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts